
ಮೈಸೂರು
ಅವಿಲಾ ಪ್ರೌಢಶಾಲೆಯಲ್ಲಿ ರಾಷ್ಟ್ರೀಯ ವಿಜ್ಞಾನ ದಿನ ಆಚರಣೆ
ಮೈಸೂರು,ಮಾ.1:- ಮೈಸೂರು ದಕ್ಷಿಣ ವಲಯ ವ್ಯಾಪ್ತಿಯ ಅವಿಲಾ ಪ್ರೌಢಶಾಲೆಯಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಕಾರ್ಯಕ್ರಮವನ್ನು ಇಂದು ಆಯೋಜಿಸಲಾಗಿತ್ತು.
ಕಾರ್ಯಕ್ರಮವನ್ನು ದಕ್ಷಿಣವಲಯ ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಆರ್.ರಾಮಾರಾಧ್ಯ ಅವರು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಉಪ ಯೋಜನಾ ಸಮನ್ವಯಾಧಿಕಾರಿ ಶಿವಕುಮಾರ್, ವಿಷಯಪರಿವೀಕ್ಷಕರಾದ ಪುಷ್ಷಲತಾ,ಕೆಂಪರಾಜು, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿಯ ನಾಗೇಶ್,ಬಿ.ಆರ್.ಪಿ ಶ್ರೀಕಂಠ ಶಾಸ್ತ್ರಿ, ಇ.ಸಿ.ಓ ಮನೋಹರ್, ಮಂಜುನಾಥ್, ಅಂಕೇಶ್,ರಾಜು ಮತ್ತಿತರರು ಉಪಸ್ಥಿತರಿದ್ದರು.
ಈ ಕಾರ್ಯಕ್ರಮದಲ್ಲಿ ವಲಯವ್ಯಾಪ್ತಿಯ 82 ಶಾಲೆಗಳಿಂದ ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ವಿವಿಧ ವಿಜ್ಞಾನೋಪಕರಣಗಳೊಂದಿಗೆ ಭಾಗವಹಿಸಿದ್ದರು. (ಜಿ.ಕೆ,ಎಸ್.ಎಚ್)