ಮೈಸೂರು

ವಿದ್ಯುತ್ ಸರಬರಾಜಿನಲ್ಲಿ ನಿಲುಗಡೆ

ಮೈಸೂರು, ಮಾ 1 :- ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ ವತಿಯಿಂದ 66/11 ಕೆ.ವಿ ಜ್ಯೋತಿನಗರ ಮತ್ತು ಹೆಮ್ಮರಗಾಲ ವಿದ್ಯುತ್ ವಿತರಣಾ ಕೇಂದ್ರದಲ್ಲಿ ಮಾರ್ಚ್ 3 ರಂದು 4ನೇ ತ್ರೈಮಾಸಿಕ ನಿರ್ವಹಣಾ ಕಾರ್ಯವನ್ನು ಹಮ್ಮಿಕೊಳ್ಳಲಾಗಿದೆ.
ಈ ಹಿನ್ನೆಲೆಯಲ್ಲಿ 66/11 ಕೆ.ವಿ ಜ್ಯೋತಿನಗರ ವ್ಯಾಪ್ತಿಯ ಜಲಪುರಿ, ಗಾಯತ್ರಿಪುರಂ, ಜ್ಯೋತಿನಗರ, ಉದಯಗಿರಿ, ಕ್ಯಾತಮಾರನಹಳ್ಳಿ, ಶಾಂತಿನಗರ 1 ಮತ್ತು 2ನೇ ಹಂತ, ಗಣೇಶ್ ನಗರ, ಸತ್ಯನಗರ, ಮಹದೇವಪುರ ರಸ್ತೆ, ಜರ್ಮನ್ ಪ್ರೆಸ್, ಉಸ್ಮಾನಿಯಾ ಬ್ಲಾಕ್, ಗೌಸಿಯಾ ನಗರ, ರಾಘವೇಂದ್ರ ನಗರ, ಗಿರಿಯಾಬೋವಿ ಪಾಳ್ಯ, ಯರಗನಹಳ್ಳಿ, ಬನ್ನೂರು ರಸ್ತೆ ಹಾಗೂ ಸುತ್ತ-ಮುತ್ತಲಿನ ಪ್ರದೇಶಗಳಲ್ಲಿ ಅಂದು ಬೆಳಗ್ಗೆ 10ರಿಂದ ಸಂಜೆ 5 ಗಂಟೆಯವರೆಗೆ ವಿದ್ಯುತ್ ನಿಲುಗಡೆಯಾಗಲಿದೆ ಎಂದು ಎನ್.ಆರ್.ಮೊಹಲ್ಲಾ ವಿಭಾಗದ ಕಾರ್ಯನಿರ್ವಾಹಕ ಇಂಜಿನಿಯರ್(ವಿ) ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

comments

Related Articles

error: