ದೇಶಪ್ರಮುಖ ಸುದ್ದಿ

ದೇಶದಲ್ಲಿ ಒಂದೇ ದಿನ 1.28 ಲಕ್ಷ ಹಿರಿಯ ನಾಗರಿಕರಿಗೆ ಕೋವಿಡ್ ಲಸಿಕೆ

ನವದೆಹಲಿ,ಮಾ.2-ಮಾರಕ ಕೊರೊನಾ ವೈರಸ್ ವಿರುದ್ಧದ ಲಸಿಕೆ ಅಭಿಯಾನದ ಮುಂದಿನ ಭಾಗವಾಗಿ ನಿನ್ನೆಯಿಂದ 60 ವರ್ಷ ಮೇಲ್ಪಟ್ಟವರಿಗೆ ಮತ್ತು 45 ವರ್ಷ ದಾಟಿದ ಇತರೆ ಅನಾರೋಗ್ಯ ಸಂಬಂಧಿತ ಸಮಸ್ಯೆಗಳಿರುವವರಿಗೆ ಲಸಿಕೆ ನೀಡಿಲಾಗುತ್ತಿದೆ.

ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಲಸಿಕೆ ಹಾಕಿಸಿಕೊಳ್ಳುವ ಮೂಲಕ ಈ ಹಂತಕ್ಕೆ ಚಾಲನೆ ನೀಡಿದ್ದರು. ನಿನ್ನೆ ಒಂದೇ ದಿನ ಒಟ್ಟು 1.28 ಲಕ್ಷ ಫಲಾನುಭವಿಗಳಿಗೆ ಲಸಿಕೆ ಹಾಕಲಾಗಿದ್ದು, ಈ ಪೈಕಿ 1,28,630 ಫಲಾನುಭವಿಗಳು 60 ವರ್ಷ ಮೇಲ್ಟಟ್ಟವರಾಗಿದ್ದು, 18,850 ಮಂದಿ 45 ವರ್ಷ ದಾಟಿದ ಇತರೆ ಅನಾರೋಗ್ಯ ಸಂಬಂಧಿತ ಸಮಸ್ಯೆಗಳಿರುವ ವ್ಯಕ್ತಿಗಳು ಲಸಿಕೆ ಪಡೆದುಕೊಂಡಿದ್ದಾರೆ.

ಆ ಮೂಲಕ ದೇಶದಲ್ಲಿ ಲಸಿಕೆ ಪಡೆದವರ ಸಂಖ್ಯೆ ಒಟ್ಟಾರೆ 1.47 ಕೋಟಿಗೆ ಏರಿಕೆಯಾಗಿದೆ. ಕಳೆದ ಜನವರಿ 16ರಂದು ದೇಶದಲ್ಲಿ ಲಸಿಕೆ ನೀಡಿಕೆ ಆರಂಭವಾಗಿತ್ತು. ಆರಂಭಿಕ ಹಂತದಲ್ಲಿ ಆರೋಗ್ಯ ಸಿಬ್ಬಂದಿಗಳಿಗೆ, ಬಳಿಕೆ ಫೆಬ್ರವರಿ 2ರಿಂದ ಮುಂಚೂಣಿ ಕಾರ್ಯಕರ್ತರಿಗೆ ಲಸಿಕೆ ಹಾಕಲಾಗಿತ್ತು. ಇದೀಗ 60 ವರ್ಷ ಮೇಲ್ಪಟ್ಟವರಿಗೆ ಮತ್ತು 45 ವರ್ಷ ದಾಟಿದ ಇತರೆ ಅನಾರೋಗ್ಯ ಸಂಬಂಧಿತ ಸಮಸ್ಯೆಗಳಿರುವ ವ್ಯಕ್ತಿಗಳಿಗೆ ಲಸಿಕೆ ನೀಡಲಾಗುತ್ತಿದೆ.

ಕೋವಿನ್ ಪೋರ್ಟಲ್ ನಲ್ಲಿ 25 ಲಕ್ಷ ಮಂದಿಯಿಂದ ನೋಂದಣಿ:

ಇನ್ನು ಲಸಿಕೆ ವಿತರಣೆಗಾಗಿ ಕೇಂದ್ರ ಸರ್ಕಾರ ಆರಂಭಿಸಿರುವ ಕೋವಿನ್ ಪೋರ್ಟಲ್ ನಲ್ಲಿ ಸುಮಾರು 25 ಲಕ್ಷಕ್ಕೂ ಅಧಿಕ ಮಂದಿ ಲಸಿಕೆ ಪಡೆಯಲು ಹೆಸರು ನೋಂದಾಯಿಸಿಕೊಂಡಿದ್ದಾರೆ. ಈ ಪೈಕಿ ಸೋಮವಾರ ಒಂದೇ ದಿನ 6.44 ಲಕ್ಷ ಆಪಾಯಿಂಟ್ ಮೆಂಟ್ ಬುಕ್ ಆಗಿದೆ ಎಂದು ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ.

ನಿನ್ನೆ ಪ್ರಧಾನಿ ನರೇಂದ್ರ ಮೋದಿ ಅವರಲ್ಲದೆ, ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು, ಒಡಿಶಾ ಮುಖ್ಯಮಂತ್ರಿ ನವೀನ್‌ ಪಟ್ನಾಯಕ್‌, ಬಿಹಾರದ ಮುಖ್ಯಮಂತ್ರಿ ನಿತೀಶ್‌ ಕುಮಾರ್‌, ಎನ್‌ಸಿಪಿ ಮುಖ್ಯಸ್ಥ ಶರದ್‌ ಪವಾರ್‌ ಸೇರಿದಂತೆ ಅನೇಕ ಗಣ್ಯರು ಲಸಿಕೆ ಹಾಕಿಸಿಕೊಂಡಿದ್ದಾರೆ. (ಏಜೆನ್ಸೀಸ್, ಎಂ.ಎನ್)

Leave a Reply

comments

Related Articles

error: