ದೇಶಪ್ರಮುಖ ಸುದ್ದಿ

ಕೋವಿಡ್ ಲಸಿಕೆ ಪಡೆದ ಟೀಂ ಇಂಡಿಯಾದ ಕೋಚ್ ರವಿಶಾಸ್ತ್ರಿ

ಅಹಮದಾಬಾದ್,(ಗುಜರಾತ್),ಮಾ.2-ಭಾರತ ಕ್ರಿಕೆಟ್ ತಂಡದ ಮುಖ್ಯ ಕೋಚ್ ರವಿಶಾಸ್ತ್ರಿ ಅವರು ಕೋವಿಡ್ ಲಸಿಕೆ ಪಡೆದುಕೊಂಡಿದ್ದಾರೆ.

ರವಿಶಾಸ್ತ್ರಿ ಅವರು ಅಹಮದಾಬಾದ್ ನ ಅಪೋಲೊ ಆಸ್ಪತ್ರೆಯಲ್ಲಿ ಲಸಿಕೆ ಪಡೆದುಕೊಂಡಿದ್ದಾರೆ. ಈ ಬಗ್ಗೆ ಸ್ವತಃ ಅವರೇ ಟ್ವೀಟ್ ಮೂಲಕ ತಿಳಿಸಿದ್ದಾರೆ.

ಕೋವಿಡ್ 19 ಲಸಿಕೆಯ ಮೊದಲ ಡೋಸ್ ಅನ್ನು ಪಡೆದೆ. ಈ ಸಾಂಕ್ರಾಮಿಕ ರೋಗದ ವಿರುದ್ಧ ಭಾರತಕ್ಕೆ ಶಕ್ತಿ ನೀಡಿದ ಅದ್ಭುತ ವೈದ್ಯಕೀಯ ವೃತ್ತಿಪರರು ಮತ್ತು ವಿಜ್ಞಾನಿಗಳಿಗೆ ಧನ್ಯವಾದಗಳು. ಕೋವಿಡ್ 19 ಲಸಿಕೆಯೊಂದಿಗೆ ವ್ಯವಹರಿಸುವಾಗ ಅಹಮದಾಬಾದ್ ನ ಅಪೋಲೊದಲ್ಲಿ ಕಾಂತೇಬನ್ ಮತ್ತು ಅವರ ತಂಡ ತೋರಿಸಿದ ವೃತ್ತಿಪರತೆ ಬಗ್ಗೆ ತುಂಬಾ ಸಂತೋಷವಾಗಿದೆ’ ಎಂದು ಅವರು ಟ್ವೀಟ್ ಮಾಡಿದ್ದಾರೆ.

ಮಾ.4 ರಿಂದ ಭಾರತ-ಇಂಗ್ಲೆಂಡ್ ನಡುವಿನ ನಾಲ್ಕನೇ ಹಾಗೂ ಅಂತಿಮ ಟೆಸ್ಟ್ ಪಂದ್ಯ ನಡೆಯಲಿದೆ. ಅದಕ್ಕೂ ಮುನ್ನ ರವಿಶಾಸ್ತ್ರಿ ಅವರು ಕೋವಿಡ್ ಲಸಿಕೆ ಪಡೆದುಕೊಂಡಿದ್ದಾರೆ. (ಏಜೆನ್ಸೀಸ್, ಎಂ.ಎನ್)

Leave a Reply

comments

Related Articles

error: