ಕರ್ನಾಟಕಪ್ರಮುಖ ಸುದ್ದಿ

ಸರ್ಕಾರಕ್ಕೆ ಮಾನ-ಮರ್ಯಾದೆ ಇದ್ದರೆ ರಾಜೀನಾಮೆ ಪಡೆದುಕೊಳ್ಳಲಿ: ಸಿದ್ದರಾಮಯ್ಯ

ಬೆಂಗಳೂರು,ಮಾ.3- ಸರ್ಕಾರಕ್ಕೆ ಮಾನ-ಮರ್ಯಾದೆ ಇದ್ದರೆ ಈ ಕೂಡಲೇ ರಮೇಶ್ ಜಾರಕಿಹೊಳಿ ರಾಜೀನಾಮೆ ಪಡೆಯಬೇಕೆಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ.

ಕಾಂಗ್ರೆಸ್ ಜನಧ್ವನಿ ಜಾಥಾಗೆ ಚಾಲನೆ ನೀಡಿ ಮಾಧ್ಯಮದವರೊಂದಿಗೆ ರಮೇಶ್ ಜಾರಕಿಹೊಳಿ ಸಿಡಿ ವಿಚಾರದ ಕುರಿತು ಮಾತನಾಡಿದ ಅವರು, ಈ ಕಾಮಕಾಂಡ ಇಡೀ ರಾಷ್ಟ್ರಕ್ಕೆ ಗೊತ್ತಾಗಿದೆ. ಮಾನ-ಮರ್ಯಾದೆ ಇರೋ ಸರ್ಕಾರ ಕೂಡಲೇ ರಾಜೀನಾಮೆ ತೆಗೆದುಕೊಂಡು ಎಫ್​ಐಆರ್​ ದಾಖಲಿಸಬೇಕು. ಮನುಷ್ಯನ ಮೌಲ್ಯಗಳಿಗೆ ಬೆಲೆ ಕೊಡುವುದಾದರೆ ಕೂಡಲೇ ರಾಜೀನಾಮೆ ತೆಗೆದುಕೊಳ್ಳಬೇಕೆಂದರು.

ಕೇಂದ್ರ ಮತ್ತು ರಾಜ್ಯ ಬಿಜೆಪಿ ಸರ್ಕಾರಗಳ ಜನ ವಿರೋಧಿ ನೀತಿಗಳ ಬಗ್ಗೆ ಜನಾಭಿಪ್ರಾಯ ರೂಪಿಸಲು ಪ್ರದೇಶ ಕಾಂಗ್ರೆಸ್ ಸಮಿತಿ ಜನಧ್ವನಿ ಜಾಥಾ ಆಯೋಜಿಸಿದೆ. (ಎಂ.ಎನ್)

Leave a Reply

comments

Related Articles

error: