ಕರ್ನಾಟಕಪ್ರಮುಖ ಸುದ್ದಿ

ರಾಸಲೀಲೆ ಸಿಡಿ ಪ್ರಕರಣ: ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ರಮೇಶ್ ಜಾರಕಿಹೊಳಿ

ಬೆಂಗಳೂರು,ಮಾ.3- ರಾಸಲೀಲೆ ಸಿಡಿ ಬಯಲು ಪ್ರಕರಣ ಹಿನ್ನೆಲೆಯಲ್ಲಿ ನೈತಿಕ ಹೊಣೆ ಹೊತ್ತು ಸಚಿವ ಸ್ಥಾನಕ್ಕೆ ರಮೇಶ್ ಜಾರಕಿಹೊಳಿ ಅವರು ರಾಜೀನಾಮೆ ನೀಡಿದ್ದಾರೆ.

ಪಕ್ಷಕ್ಕೆ ಮುಜುಗರ ಆಗಬಾರದು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ರಮೇಶ್ ಜಾರಕಿಹೊಳಿ ಅವರು ತಮ್ಮ ರಾಜೀನಾಮೆಯನ್ನು ನೀಡಿದ್ದಾರೆ.

ಪ್ರಕರಣದ ಕುರಿತು ಪ್ರತಿಕ್ರಿಯಿಸಿದ್ದ ರಮೇಶ್ ಜಾರಕಿಹೊಳಿ, ಇದೊಂದು ರಾಜಕೀಯ ಪಿತೂರಿ. ಈ ಬಗ್ಗೆ ಸಂಪೂರ್ಣ ತನಿಖೆಯಾಗಲಿ. ನಾನು ಯಾವ ತಪ್ಪನ್ನು ಮಾಡಿಲ್ಲ. ನಾನೇಕೆ ರಾಜೀನಾಮೆ ಕೊಡಲಿ ಎಂದಿದ್ದರು. ಇದೀಗ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಿದ್ದಾರೆ.

ರಮೇಶ್ ಜಾರಕಿಹೊಳಿ ರಾಸಲೀಲೆಯ ಸಿಡಿಯನ್ನು ಸಾಮಾಜಿಕ ಕಾರ್ಯಕರ್ತ ದಿನೇಶ್ ಕಲ್ಲಳ್ಳಿ ಅವರು ನಿನ್ನೆ ಬಿಡಗುಡೆ ಮಾಡಿದ್ದರು. ಇದು ರಾಜ್ಯ ರಾಜಕೀಯದಲ್ಲಿ ಭಾರೀ ಸದ್ದು ಮಾಡಿತ್ತು. ಇದು ರಾಜ್ಯ ಸರ್ಕಾರಕ್ಕೂ ಮುಜುಗರ ಉಂಟಾಗಿತ್ತು. ವಿಪಕ್ಷಗಳು ರಮೇಶ್ ಜಾರಕಿಹೊಳಿಯಿಂದ ರಾಜೀನಾಮೆ ಪಡೆಯುವಂತೆ ಆಗ್ರಹಿಸಿದ್ದವು. (ಎಂ.ಎನ್)

 

Leave a Reply

comments

Related Articles

error: