ಕರ್ನಾಟಕ

ವನ್ಯಜೀವಿ ಸಂರಕ್ಷಣಾ ಅಭಿಯಾನಕ್ಕೆ ಚಾಲನೆ

ಪ್ರವಾಸೋದ್ಯಮ ಇಲಾಖೆ, ಮಾಧ್ಯಮವೊಂದರ ಸಹಯೋಗದಲ್ಲಿ ವನ್ಯಜೀವಿ ಸಂರಕ್ಷಣಾ ಅಭಿಯಾನಕ್ಕೆ ಬೆಂಗಳೂರಿನಲ್ಲಿ ಚಾಲನೆ ನೀಡಲಾಯಿತು.
ದಕ್ಷಿಣ ಭಾರತದ ಖ್ಯಾತ ಚಿತ್ರನಟ ಪ್ರಕಾಶ್ ರೈ​ ಅಭಿಯಾನದ ರಾಯಭಾರಿಯಾಗಿದ್ದು, ವನ್ಯಜೀವಿ ಸಂರಕ್ಷಣೆಯ ಮಹತ್ವವನ್ನು ಸಾರಲಿದ್ದಾರೆ.ಅಭಿಯಾನಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ ನೀಡಿದ್ದು, ಅರಣ್ಯ ಸಚಿವ ರಮಾನಾಥ ರೈ, ಪ್ರವಾಸೋದ್ಯಮ ಸಚಿವ ಪ್ರಿಯಾಂಕ್ ಖರ್ಗೆ, ನಟಿ ಭಾವನಾ, ಇತರರು ಭಾಗಿಯಾಗಿದ್ದರು.2 ತಿಂಗಳ ಕಾಲ ನಡೆಯಲಿರುವ ವನ್ಯಜೀವಿ ಸಂರಕ್ಷಣಾ ಅಭಿಯಾನದಲ್ಲಿ ಕಾಡಂಚಿನ ಗ್ರಾಮಗಳಲ್ಲಿ ಮತ್ತು ಶಾಲಾ-ಕಾಲೇಜುಗಳಲ್ಲಿ ಅಧ್ಯಯನ ಮತ್ತು ಜಾಗೃತಿ ಅಭಿಯಾನ ನಡೆಯಲಿದೆ.ಏಪ್ರಿಲ್ 24-25ರಂದು ಬಂಡಿಪುರ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಅಭಿಯಾನ ಆರಂಭವಾಗಲಿದೆ. ರಾಜ್ಯದ 5 ಹುಲಿ ಸಂರಕ್ಷಿತ ಪ್ರದೇಶ, 2 ವನ್ಯಜೀವಿಧಾಮಗಳಿಗೆ ಪ್ರಕಾಶ್​ರಾಜ್ ಭೇಟಿ ನೀಡಲಿದ್ದಾರೆ. (ಕೆ.ಎಸ್-ಎಸ್.ಎಚ್)

Leave a Reply

comments

Related Articles

error: