ಕರ್ನಾಟಕಪ್ರಮುಖ ಸುದ್ದಿ

ಕೊರೊನಾ ಲಸಿಕೆ ಹಾಕಿಸಿಕೊಂಡ ಸಂಸದ ಸಂಗಣ್ಣ ಕರಡಿ

ಕೊಪ್ಪಳ,ಮಾ.5-ಸಂಸದ ಸಂಗಣ್ಣ ಕರಡಿ ಅವರು ಇಂದು ಕೋವಿಡ್ ಲಸಿಕೆ ಹಾಕಿಸಿಕೊಂಡರು. ಇಲ್ಲಿನ ಜಿಲ್ಲಾ ಆಸ್ಪತ್ರೆಗೆ ಆಗಮಿಸಿದ ಸಂಸದರು ಹಾಗೂ ಅವರ ಪತ್ನಿ ನಿಂಗಮ್ಮ ಇಬ್ಬರು ಲಸಿಕೆ ಪಡೆದುಕೊಂಡರು.

ಲಸಿಕೆ ಪಡೆದ ಬಳಿಕ ಅವರು 15 ನಿಮಿಷಗಳ ಕಾಲ ವಿಶ್ರಾಂತಿ ಕೊಠಡಿಯಲ್ಲಿ ವೈದ್ಯರ ನಿಗಾದಲ್ಲಿದ್ದರು. ಲಸಿಕೆಯಿಂದ ಯಾವುದೇ ಅಡ್ಡ ಪರಿಣಾಮಗಳು ಕಾಣಿಸಿಕೊಳ್ಳದಿರುವುದನ್ನು ಖಾತರಿ ಪಡಿಸಿಕೊಂಡ ಬಳಿಕ ಆಸ್ಪತ್ರೆಯಿಂದ ತೆರಳಿದರು.

ಈ ಸಂದರ್ಭದಲ್ಲಿ ಡಿಎಚ್‌ಒ ಡಾ. ಅಲಕನಂದಾ, ಜಿಲ್ಲಾಸ್ಪತ್ರೆಯ ಶಸ್ತ್ರ ಚಿಕಿತ್ಸಕ ಡಾ.ಎಸ್.ಬಿ.ದಾನರಡ್ಡಿ, ಕಿಮ್ಸ್ ನಿರ್ದೇಶಕ ಡಾ. ವಿಜಯನಾಥ ಇಟಗಿ ಇದ್ದರು. (ಎಂ.ಎನ್)

Leave a Reply

comments

Related Articles

error: