ಮೈಸೂರು

ಅಧಿಕಾರಿಗಳಿಗೆ ‘ಸೈಬರ್ ಸೆಕ್ಯೂರಿಟಿ & ಇ-ಗವರ್ನೆನ್ಸ್’ ಕುರಿತ ವಿಶೇಷ ಕಾರ್ಯಾಗಾರ

ಮೈಸೂರು, ಮಾ .6 :- ಕೇಂದ್ರ ಸರ್ಕಾರದ ಸಾಮರ್ಥ್ಯಾ ಭಿವೃದ್ಧಿ ಯೋಜನೆಯಡಿ ಇ-ಆಡಳಿತ ಇಲಾಖೆ, ಇ-ಆಡಳಿತ ಕೋಶ, ಆಡಳಿತ ತರಬೇತಿ ಸಂಸ್ಥೆ ಮತ್ತು ಜಿಲ್ಲಾ ತರಬೇತಿ ಸಂಸ್ಥೆಯ ಸಹಯೋಗದಲ್ಲಿ ಮೈಸೂರು ಜಿಲ್ಲೆಯ ಎಲ್ಲಾ ಇಲಾಖೆಗಳ ‘ಎ’ ಗುಂಪಿನ ಅಧಿಕಾರಿಗಳಿಗೆ ‘ಸೈಬರ್ ಸೆಕ್ಯೂರಿಟಿ & ಇ-ಗವರ್ನೆನ್ಸ್’ ಕುರಿತು ಒಂದು ದಿನದ ವಿಶೇಷ ಕಾರ್ಯಗಾರವನ್ನು ಮಾರ್ಚ್ 8ರಂದು ಬೆಳಿಗ್ಗೆ 9.30 ರಿಂದ ಸಂಜೆ 5.30 ಗಂಟೆಯವರೆಗೆ ಜಿಲ್ಲಾ ತರಬೇತಿ ಸಂಸ್ಥೆಯಲ್ಲಿ ಆಯೋಜಿಸಲಾಗಿದೆ.

ಕಾರ್ಯಕ್ರಮವನ್ನು ಆಡಳಿತ ತರಬೇತಿ ಸಂಸ್ಥೆಯ ಮಹಾನಿರ್ದೇಶಕರಾದ ವಿ.ಮಂಜುಳ, ಅಪರ ಮುಖ್ಯ ಕಾರ್ಯದರ್ಶಿ ರಾಜೀವ್ ಚಾವ್ಲಾ ಹಾಗೂ ಅಪರ ಮುಖ್ಯಕಾರ್ಯದರ್ಶಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯ (ಇ-ಆಡಳಿತ ) ಮಾರ್ಗದರ್ಶನದಲ್ಲಿ ಹಮ್ಮಿಕೊಳ್ಳಲಾಗಿದೆ. ಮೈಸೂರು ಜಿಲ್ಲೆಯ ಎಲ್ಲಾ ಇಲಾಖೆಗಳ ‘ಎ’ ಗುಂಪಿನ ಅಧಿಕಾರಿಗಳು ಈ ಕಾರ್ಯಕ್ರಮದಲ್ಲಿಭಾಗವಹಿಸಬಹುದು ಎಂದು ಜಿಲ್ಲಾ ತರಬೇತಿ ಸಂಸ್ಥೆಯ ಪ್ರಾಚಾರ್ಯರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

comments

Related Articles

error: