ಕ್ರೀಡೆಪ್ರಮುಖ ಸುದ್ದಿ

ಟೆಸ್ಟ್ ಸರಣಿಯಲ್ಲಿ ಎರಡು ಬಾರಿ 30ವಿಕೆಟ್ ಪಡೆದ ಆಫ್ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ !

ದೇಶ( ಅಹ್ಮದಾಬಾದ್)ಮಾ.6:- ಆಫ್ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ ಟೆಸ್ಟ್ ಸರಣಿಯಲ್ಲಿ ಎರಡು ಪ್ರತ್ಯೇಕ ಸಂದರ್ಭಗಳಲ್ಲಿ 30 ವಿಕೆಟ್ ಅಥವಾ ಅದಕ್ಕಿಂತ ಹೆಚ್ಚು ವಿಕೆಟ್ ಪಡೆದ ಮೊದಲ ಭಾರತೀಯ ಕ್ರಿಕೆಟಿಗ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.

ಈಗ ಇಂಗ್ಲೆಂಡ್ ವಿರುದ್ಧ ನಡೆಯುತ್ತಿರುವ ನಾಲ್ಕು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಅಶ್ವಿನ್ ಅವರು 30 ವಿಕೆಟ್ ಗಳನ್ನು ಪಡೆದಿದ್ದು, 2015 ರಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧದ ನಾಲ್ಕು ಪಂದ್ಯಗಳ ಸರಣಿಯಲ್ಲಿ 31 ವಿಕೆಟ್ ಪಡೆದಿದ್ದರು.

ಬಿಶನ್ ಸಿಂಗ್ ಬೇಡಿ, ಹರ್ಭಜನ್ ಸಿಂಗ್, ಬಿ.ಎಸ್.ಚಂದ್ರಶೇಖರ್, ಕಪಿಲ್ ದೇವ್ ಅವರು ಒಂದೇ ಟೆಸ್ಟ್ ಸರಣಿಯಲ್ಲಿ 30ಕ್ಕೂ ಹೆಚ್ಚು ವಿಕೆಟ್ ಪಡೆದಿದ್ದಾರೆ. ಆದರೆ ಅಶ್ವಿನ್ ಅವರು ಎರಡು ಬಾರಿ 30ಕ್ಕೂ ಹೆಚ್ಚು ವಿಕೆಟ್ ಪಡೆದಿದ್ದಾರೆ. (ಏಜೆನ್ಸೀಸ್,ಎಸ್.ಎಚ್)

Leave a Reply

comments

Related Articles

error: