ಕರ್ನಾಟಕಪ್ರಮುಖ ಸುದ್ದಿ

ರಾಜ್ಯದಲ್ಲಿ 580 ಕೊರೋನಾ ವೈರಸ್ ಸೋಂಕು ಪ್ರಕರಣಗಳು ಪತ್ತೆ

ರಾಜ್ಯ( ಬೆಂಗಳೂರು)ಮಾ.6:- ರಾಜ್ಯದಲ್ಲಿ ಕೊರೋನಾ ಅಬ್ಬರ ಮತ್ತೆ ಶುರುವಾಗಿದ್ದು 580 ಕೊರೋನಾ ಪ್ರಕರಣಗಳು ಪತ್ತೆಯಾಗಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 9,54,393ಕ್ಕೆ ಏರಿಕೆಯಾಗಿದೆ.

ಕಳೆದ 24 ಗಂಟೆಯಲ್ಲಿ ರಾಜ್ಯದಲ್ಲಿ ಕೊರೋನಾ ಸೋಂಕಿನಿಂದ ಐವರು ಸೋಂಕಿತರು ಮೃತಪಟ್ಟಿದ್ದು, ಸಾವಿನ ಸಂಖ್ಯೆ 12,359ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

ಬೆಂಗಳೂರಿನಲ್ಲಿ 367 ಮಂದಿಗೆ ಸೋಂಕು ದೃಢಪಟ್ಟಿದ್ದು, ಇದರೊಂದಿಗೆ ಸೋಂಕಿತರ ಸಂಖ್ಯೆ 4,07,636ಕ್ಕೆ ಏರಿಕೆಯಾಗಿದೆ. ನಗರದಲ್ಲಿ ಸೋಂಕಿಗೆ ಮೂವರು ಬಲಿಯಾಗಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.

ರಾಜ್ಯದಲ್ಲಿ 355 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 9,35,421ಕ್ಕೆ ಏರಿಕೆಯಾಗಿದೆ. 6,594 ಸಕ್ರೀಯ ಪ್ರಕರಣಗಳಿದ್ದು, ಈ ಪೈಕಿ 109 ಮಂದಿ ಕೋವಿಡ್ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: