ಸುದ್ದಿ ಸಂಕ್ಷಿಪ್ತ

ಮೇಲ್ವಿಚಾರಕ ಹುದ್ದೆಗಾಗಿ ಅರ್ಜಿ ಆಹ್ವಾನ

ಮೈಸೂರು, ಮಾ.8 :- ನಂಜನಗೂಡು ತಾಲೂಕಿನ ತಗಡೂರು ಗ್ರಾಮ ಪಂಚಾಯಿತಿ ಕಾರ್ಯಾಲಯದ ವತಿಯಿಂದ ಗ್ರಾಮ ಪಂಚಾಯತ್ ಗ್ರಂಥಾಲಯದಲ್ಲಿ ಮೇಲ್ವಿಚಾರಕ ಹುದ್ದೆಗಾಗಿ ಅರ್ಜಿಯನ್ನು ಆಹ್ವಾನಿಸಲಾಗಿದೆ.
ಆಸಕ್ತರು ಅರ್ಜಿ ನಮೂನೆಗಳನ್ನು ತಗಡೂರು ಗ್ರಾಮ ಪಂಚಾಯಿತಿ ಕಚೇರಿಯಿಂದ ಪಡೆದು ವಿವರಗಳನ್ನು ಭರ್ತಿ ಮಾಡಿ ಜನ್ಮ ದಿನಾಂಕ, ವಿದ್ಯಾರ್ಹತೆ, ಮೀಸಲಾತಿ, ಸಂಬಂಧಿಸಿದ ತಾಲ್ಲೂಕು ತಹಶೀಲ್ದಾರರ ಕಚೇರಿಯಿಂದ ಪಡೆದ ವಾಸ ಸ್ಥಳ ದೃಢೀಕರಣ, ಅನುಭವ/ತರಬೇತಿಇನ್ನಿತರ ಅವಶ್ಯಕ ಪ್ರಮಾಣ ಪತ್ರಗಳ ದೃಢೀಕೃತ ಪ್ರತಿಯೊಂದಿಗೆ ಏಪ್ರಿಲ್ 8ರೊಳಗಾಗಿ ತಗಡೂರು ಗ್ರಾಮ ಪಂಚಾಯಿತಿ ಕಚೇರಿಗೆ ಸಲ್ಲಿಸಬೇಕು ಎಂದು ತಗಡೂರು ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

comments

Related Articles

error: