ದೇಶಪ್ರಮುಖ ಸುದ್ದಿ

ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 15,388   ಕೊರೋನಾ ಸೋಂಕು  ಪ್ರಕರಣ ಪತ್ತೆ

ದೇಶ(ನವದೆಹಲಿ)ಮಾ.9:-   ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 15,388   ಕೊರೋನಾ ಸೋಂಕು  ಪ್ರಕರಣ ಪತ್ತೆಯಾಗಿದ್ದು, ಇದುವರೆಗಿನ ಒಟ್ಟು ಸೋಂಕಿತರ ಸಂಖ್ಯೆ 1,12,44,786ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ.

ಒಂದೇ ದಿನ ಮಹಾಮಾರಿ ವೈರಸ್ ಗೆ 77 ಮಂದಿ ಸಾವನ್ನಪ್ಪಿದ್ದಾರೆ. ಸಾವಿನ ಸಂಖ್ಯೆ 1,57,930ಕ್ಕೆ ಏರಿದೆ.  ನಿನ್ನೆ ಒಂದೇ ದಿನ 16, 596 ಮಂದಿ ಕೊರೋನಾದಿಂದ ಚೇತರಿಸಿಕೊಂಡಿದ್ದಾರೆ.  ಈ ಮೂಲಕ ಇದುವರೆಗೆ ಒಟ್ಟೂ 1,08,99,394 ಜನರು ಸೋಂಕಿನಿಂದ ಗುಣಮುಖರಾಗಿದ್ದಾರೆ.  ಇದೀಗ ಪ್ರಸ್ತುತ 1,87,462 ಮಂದಿ ದೇಶದ ನಾನಾ ನಿಗದಿತ ಆಸ್ಪತ್ರೆಗಳಲ್ಲಿ ಕೋವಿಡ್ ಚಿಕಿತ್ಸೆ ಪಡೆಯುತ್ತಿದ್ದಾರೆ. (ಏಜೆನ್ಸೀಸ್,ಎಸ್.ಎಚ್)

Leave a Reply

comments

Related Articles

error: