ಮೈಸೂರು

ಶಿಕ್ಷಣ ಉತ್ತಮ ಬದುಕು ರೂಪಿಸಲು ನೆರವಾಗಲಿದೆ : ಪ್ರೊ.ಮಲೆಯೂರು ಗುರುಸ್ವಾಮಿ

ಶಿಕ್ಷಣ ಉತ್ತಮ ಬದುಕನ್ನು ಕಟ್ಟಿಕೊಳ್ಳಲು ನೆರವಾಗಲಿದ್ದು, ವಿದ್ಯಾರ್ಥಿಗಳು ಅಸಡ್ಡೆ ಮಾಡದೆ ಉತ್ತಮ ಶಿಕ್ಷಣವನ್ನು ಪಡೆಯುವ ಮೂಲಕ ಅತ್ಯುತ್ತಮ ಬದುಕನ್ನು ರೂಪಿಸಿಕೊಳ್ಳಬೇಕು ಎಂದು ಸಾಹಿತಿ ಪ್ರೊ.ಮಲೆಯೂರು ಗುರುಸ್ವಾಮಿ ಅಭಿಪ್ರಾಯಪಟ್ಟರು.
ಗುರುವಾರ ಮೈಸೂರಿನ ರಾಜೇಂದ್ರ ನಗರದ ಶ್ರೀ ಛಾಯಾದೇವಿ ಶಿಕ್ಷಣ ಮಹಾವಿದ್ಯಾಲಯದಲ್ಲಿ ಆಯೋಜಿಸಿದ್ದ ವಿದ್ಯಾರ್ಥಿ ಸಂಘದ ಉದ್ಘಾಟನಾ ಸಮಾರಂಭ ಹಾಗೂ ಪ್ರಥಮ ವರ್ಷದ ಬಿ.ಇಡಿ ವಿದ್ಯಾರ್ಥಿಗಳಿಗೆ ಸ್ವಾಗತ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಶಿಕ್ಷಣ ಅತೀ ಮುಖ್ಯ. ವಿದ್ಯಾರ್ಥಿಗಳು ಶಾಲಾ ಹಂತದಿಂದಲೇ ನಿರ್ದಿಷ್ಟ ಗುರಿಯನ್ನಿಟ್ಟುಕೊಂಡು ಅಭ್ಯಾಸ ಮಾಡಬೇಕು. ಗುರಿ ಸಾಧನೆಯೆಡೆಗೆ ನಿರಂತರ ಪರಿಶ್ರಮದಿಂದ ಮುನ್ನುಗ್ಗಬೇಕು. ಕಷ್ಟಗಳಿಗೆ ಎದೆಗುಂದದೆ ಧೈರ್ಯವಾಗಿ ಎದುರಿಸುವ ಮನೋಭಾವ ಬೆಳೆಸಿಕೊಳ್ಳಬೇಕು. ಮುಂದೆ ಶಿಕ್ಷಕರಾಗುವ ನೀವು ಉತ್ತಮ ಮೌಲ್ಯಗಳನ್ನು ಅಳವಡಿಸಿಕೊಳ್ಳಬೇಕು. ದೇಶದ ಭವಿಷ್ಯದ ಪ್ರಜೆಗಳನ್ನು ರೂಪಿಸುವ ಶಕ್ತಿ ಸಾಮರ್ಥ್ಯ ಹಾಗೂ ಗುರುತರವಾದ ಜವಾಬ್ದಾರಿ ನಿಮ್ಮ ಮೇಲಿದ್ದು ಅದಕ್ಕೆ ಚ್ಯುತಿಬಾರದ ಹಾಗೆ ನಡೆದುಕೊಳ್ಳಬೇಕು ಎಂದು ಸಲಹೆ ನೀಡಿದರು.
ಕಾರ್ಯಕ್ರಮದಲ್ಲಿ ರಾಷ್ಟ್ರಪ್ರಶಸ್ತಿ ಪುರಸ್ಕೃತ ವಿಶ್ರಾಂತ ಕನ್ನಡ ಭಾಷಾ ಅಧ್ಯಾಪಕ ಚೀಲೂರು ಚಂದ್ರಶೇಖರ್, ಶ್ರೀ ಛಾಯಾದೇವಿ ಶಿಕ್ಷಣ ಮಹಾವಿದ್ಯಾಲಯದ ಪ್ರಾಂಶುಪಾಲ ಡಾ.ಜೆ.ಸಿ.ನಾಗೇಂದ್ರ ಸೇರಿದಂತೆ ಹಲವರು ಉಪಸ್ಥಿತರಿದ್ದರು.(ಬಿ.ಎಂ-ಎಸ್.ಎಚ್)

Leave a Reply

comments

Related Articles

error: