ಪ್ರಮುಖ ಸುದ್ದಿ

ಜೆಡಿಎಸ್ ಶಾಸಕ ಎಂ.ಸಿ.ಮನಗೂಳಿ ಪುತ್ರ ಅಶೋಕ ಮನಗೂಳಿ ಕಾಂಗ್ರೆಸ್ ಸೇರ್ಪಡೆ

ರಾಜ್ಯ( ವಿಜಯಪುರ )ಮಾ.10:- ಮಾಜಿ ಸಚಿವ, ಜೆಡಿಎಸ್ ಶಾಸಕರಾಗಿದ್ದ ಎಂ.ಸಿ.ಮನಗೂಳಿ ಅವರ ಪುತ್ರ ಅಶೋಕ ಮನಗೂಳಿ ಜೆಡಿಎಸ್ ತೊರೆದು ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ.

ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ ಪಕ್ಷದ ಧ್ವಜ ನೀಡುವ ಮೂಲಕ ಅಶೋಕ ಮನಗೂಳಿ ಅವರನ್ನು ಕಾಂಗ್ರೆಸ್ ಪಕ್ಷಕ್ಕೆ ಸ್ವಾಗತಿಸಿದರು.

ಜಿಲ್ಲೆಯ ಕಾಂಗ್ರೆಸ್ ಶಾಸಕರಾದ ಎಂ.ಬಿ.ಪಾಟೀಲ, ಶಿವಾನಂದ ಪಾಟೀಲ, ಯಶವಂತರಾಯಗೌಡ ಪಾಟೀಲ, ಪ್ರಕಾಶ ರಾಠೋಡ, ಸುನಿಲಗೌಡ ಪಾಟೀಲ, ಮಾಜಿ ಸಚಿವ ಸಿ.ಎಸ್.ನಾಡಗೌಡ ಇತರರ ಸಮ್ಮುಖದಲ್ಲಿ ಅಶೋಕ ಮನಗೂಳಿ ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: