ದೇಶಪ್ರಮುಖ ಸುದ್ದಿಮನರಂಜನೆ

ನಿರ್ದೇಶಕ ಸಂಜಯ್ ಲೀಲಾ ಬನ್ಸಾಲಿಗೆ ಕೋವಿಡ್ ಪಾಸಿಟಿವ್

ಮುಂಬೈ,ಮಾ.10-ಬಾಲಿವುಡ್ ನ ಪ್ರಖ್ಯಾತ ನಿರ್ದೇಶಕ ಸಂಜಯ್ ಲೀಲಾ ಬನ್ಸಾಲಿಗೆ ಕೋವಿಡ್ 19 ಸೋಂಕು ತಗುಲಿರುವುದು ದೃಢಪಟ್ಟಿದೆ.

ಕೋವಿಡ್-19 ಪಾಸಿಟಿವ್ ಎಂದು ವರದಿ ಬಂದ ಬಳಿಕ ಸಂಜಯ್ ಲೀಲಾ ಬನ್ಸಾಲಿ ಚಿಕಿತ್ಸೆ ಪಡೆಯುತ್ತಿದ್ದು, ತಮ್ಮ ಆಫೀಸ್ ನಲ್ಲೇ ಕ್ವಾರಂಟೈನ್ ನಲ್ಲಿದ್ದಾರೆ. ಸಂಜಯ್ ಲೀಲಾ ಬನ್ಸಾಲಿ ತಾಯಿ ಕೂಡ ಕೋವಿಡ್-19 ಟೆಸ್ಟ್ ಗೆ ಒಳಗಾಗಿದ್ದು, ವರದಿ ಬರಬೇಕಿದೆ.

ಸದ್ಯ ‘ಗಂಗೂಬಾಯಿ ಕಾಥಿಯಾವಾಡಿ’ ಚಿತ್ರೀಕರಣವನ್ನು ಸ್ಥಗಿತಗೊಳಿಸಲಾಗಿದೆ. ಚಿತ್ರದಲ್ಲಿ ಆಲಿಯಾ ಭಟ್ ಪ್ರಮುಖ ಪಾತ್ರ ನಿರ್ವಹಿಸುತ್ತಿದ್ದಾರೆ. ಸಿನಿಮಾದಲ್ಲಿ ಅಜಯ್ ದೇವ್ಗನ್ ಕೂಡ ನಟಿಸುತ್ತಿದ್ದಾರೆ. ಸದ್ಯ ಅಜಯ್ ದೇವ್ಗನ್ ಭಾಗದ ಚಿತ್ರೀಕರಣ ನಡೆಯುತ್ತಿತ್ತು. ಆದರೆ ಚಿತ್ರೀಕರಣವನ್ನು ಸ್ಥಗಿತಗೊಳಿಸಲಾಗಿದೆ.

ಬರೋಬ್ಬರಿ 22 ವರ್ಷಗಳ ಲಾಂಗ್ ಗ್ಯಾಪ್ ನಂತರ ಸಂಜಯ್ ಲೀಲಾ ಬನ್ಸಾಲಿ ಹಾಗೂ ಅಜಯ್ ದೇವ್ಗನ್ ಒಂದಾಗಿರುವುದು ಈ ಚಿತ್ರದ ಮೂಲಕವೇ. 1999 ರಲ್ಲಿ ತೆರೆಕಂಡ ಸಂಜಯ್ ಲೀಲಾ ಬನ್ಸಾಲಿ ರವರ ‘ಹಮ್ ದಿಲ್ ದೇ ಚುಕೇ ಸನಂ’ ಚಿತ್ರದಲ್ಲಿ ಅಜಯ್ ದೇವ್ಗನ್ ನಟಿಸಿದ್ದರು. (ಏಜೆನ್ಸೀಸ್, ಎಂ.ಎನ್)

Leave a Reply

comments

Related Articles

error: