ಪ್ರಮುಖ ಸುದ್ದಿಮೈಸೂರು

ಶಶಿಕಲಾ ಜೊಲ್ಲೆ ಅವರನ್ನು ಅಭಿನಂದಿಸಿದ ರೇಣುಕಾ ರಾಜ

ಮೈಸೂರು,ಮಾ.10:-  ಮೈಸೂರು ನಗರ ಬಿಜೆಪಿ ಮಹಿಳಾ ಪ್ರಧಾನ ಕಾರ್ಯದರ್ಶಿ ಹಾಗೂ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಇಲಾಖೆಯ ನಿರ್ದೇಶಕರಾದ ರೇಣುಕರಾಜ ಅವರು ಮಹಿಳಾ ಮತ್ತು ಮಕ್ಕಳ ಸಚಿವೆ ಶಶಿಕಲಾ ಅವರನ್ನು ಅಭಿನಂದಿಸಿದರು.

ಇಂದು ಬೆಂಗಳೂರಿನ ಅರಮನೆ ಆವರಣದಲ್ಲಿ ಮಹಿಳಾ ಮತ್ತು ಮಕ್ಕಳ ಸಚಿವೆ ಶಶಿಕಲಾ ಜೊಲ್ಲೆ ಅವರನ್ನು ಭೇಟಿ ಮಾಡಿ ಮಹಿಳಾ ಅಭಿವೃದ್ಧಿಗೆ ಹೆಚ್ಚು ಆದ್ಯತೆ ಕೊಡಲು ಶ್ರಮ ಹಾಕಿದ ಶಶಿಕಲಾ ಜೊಲ್ಲೆ ಅವರಿಗೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಭಿವೃದ್ಧಿ ನಿಗಮದ ವತಿಯಿಂದ ಅಭಿನಂದನೆ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶಶಿಕಲಾ ಟೆಂಗಳಿ ಹಾಗೂ ನಿರ್ದೇಶಕರಾದ ರೇಣುಕಾರಾಜ ಹಾಗೂ ಬಿಜೆಪಿಯ ರಾಜ್ಯ ಅಧ್ಯಕ್ಷರಾದ   ಗೀತಾ ವಿವೇಕಾನಂದ ಅವರು ಉಪಸ್ಥಿತರಿದ್ದರು.(ಕೆ.ಎಸ್.ಎಸ್.ಎಚ್)

Leave a Reply

comments

Related Articles

error: