ಮೈಸೂರು

ಮೈಸೂರು ಜಿಲ್ಲೆಯಲ್ಲಿ 33ಮಂದಿಯಲ್ಲಿ ಕೊರೋನಾ ವೈರಸ್ ಸೋಂಕು ದೃಢ

ಮೈಸೂರು,ಮಾ.13:- ಮೈಸೂರು ಜಿಲ್ಲೆಯಲ್ಲಿ ನಿನ್ನೆ 33ಮಂದಿಯಲ್ಲಿ ಕೊರೋನಾ ವೈರಸ್ ಸೋಂಕು ದೃಢಪಟ್ಟಿದೆ. ಒಟ್ಟು ಪ್ರಕರಣಗಳ ಸಂಖ್ಯೆ 54,367ಕ್ಕೆ ಏರಿಕೆಯಾಗಿದೆ.
ಕಳೆದ ನಾಲ್ಕು ದಿನಗಳಲ್ಲಿ ಒಟ್ಟು 156 ಪ್ರಕರಣಗಳು ವರದಿಯಾಗಿದ್ದು ಆತಂಕ ಮೂಡಿಸಿದೆ. 120ರಷ್ಟಿದ್ದ ಕೊರೋನಾ ಸೋಂಕು ಇದೀಗ 188ಕ್ಕೇರಿದೆ. ನಿನ್ನೆ 20ಮಂದಿ ಗುಣಮುಖರಾಗಿದ್ದಾರೆ. 50ಮಂದಿ ಮನೆಗಳಲ್ಲೇ ಐಸೋಲೇಷನ್ ಆಗಿದ್ದಾರೆ. ಸರ್ಕಾರಿ ಆಸ್ಪತ್ರೆಯಲ್ಲಿ 19ಹಾಗೂ ಖಾಸಗಿ ಆಸ್ಪತ್ರೆಯಲ್ಲಿ 106ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ. 7ಮಂದಿ ಕೋವಿಡ್ ಕೇರ್ ಕೇಂದ್ರಗಳಲ್ಲಿ ಐಸೋಲೇಷನ್ ನಲ್ಲಿದ್ದಾರೆ.ರೋಗಿಗಳ ಸಂಪರ್ಕಕ್ಕೆ ಬಂದ 23ಮಂದಿ ಶೀತಜ್ವರ ಮಾದರಿಯ ಅನಾರೋಗ್ಯ ಲಕ್ಷಣಗಳಿಂದ ಬಳಲುತ್ತಿದ್ದ 5ಮಂದಿ, ತೀವ್ರ ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ ಇಬ್ಬರಲ್ಲಿ ಕೊರೋನಾ ವೈರಸ್ ಸೋಂಕು ಕಾಣಿಸಿಕೊಂಡಿದೆ ಎಂದು ಜಿಲ್ಲಾಡಳಿತ ವರದಿಯಲ್ಲಿ ತಿಳಿಸಿದೆ. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: