Uncategorized

ಕೊರೊನಾ ಲಸಿಕೆ ಹಾಕಿಸಿಕೊಂಡ ಸಿಎಂ ಬಿ.ಎಸ್.ಯಡಿಯೂರಪ್ಪ, ಸಚಿವ ಡಾ.ಕೆ.ಸುಧಾಕರ್

ಬೆಂಗಳೂರು,ಮಾ.13-ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹಾಗೂ ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಅವರು ಕೊರೊನಾ ಲಸಿಕೆಯನ್ನು ಹಾಕಿಸಿಕೊಂಡಿದ್ದಾರೆ.

ನಗರದ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಬಿಎಸ್ವೈ ಹಾಗೂ ಸುಧಾಕರ್ ಅವರು ಲಸಿಕೆಯ ಮೊದಲ ಡೋಸ್ ಅನ್ನು ಪಡೆದುಕೊಂಡರು.

ಲಸಿಕೆ ಪಡೆದುಕೊಂಡ ಬಳಿಕ ಕೆಲ ಹೊತ್ತು ಆಸ್ಪತ್ರೆಯಲ್ಲೇ ಇದ್ದರು. ವೈದ್ಯರು ಇವರ ಮೇಲೆ ನಿಗಾ ವಹಿಸಿದ್ದರು.  ಲಸಿಕೆಯಿಂದ ಸದ್ಯಕ್ಕೆ ಯಾವುದೇ ಅಡ್ಡ ಪರಿಣಾಮವಾಗಿಲ್ಲ ಎಂಬುದನ್ನು ಖಚಿತ ಪಡಿಸಿಕೊಂಡ ಬಳಿಕ ಆಸ್ಪತ್ರೆಯಿಂದ ತೆರಳಿದರು.

ದೇಶಾದ್ಯಂತ ಮಾರ್ಚ್ 1ರಿಂದ ಎರಡನೇ ಹಂತದ ಕೊರೊನಾ ಲಸಿಕಾ ಅಭಿಯಾನ ಆರಂಭಗೊಂಡಿದೆ. ಈ ಅಭಿಯಾನದಲ್ಲಿ ಸಾರ್ವಜನಿಕರಿಗೂ ಲಸಿಕೆ ನೀಡಲಾಗುತ್ತಿದೆ. ಈಗಾಗಲೇ ರಾಷ್ಟ್ರಪತಿ ಕೋವಿಂದ್, ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು, ಪ್ರಧಾನಿ ನರೇಂದ್ರ ಮೋದಿ, ರಾಜ್ಯದ ಅನೇಕ ಸಚಿವರು ಕೊರೊನಾ ಲಸಿಕೆಯನ್ನು ಪಡೆದುಕೊಂಡಿದ್ದಾರೆ. ಇದೀಗ ಸಿಎಂ ಬಿಎಸ್ವೈ, ಸುಧಾಕರ್ ಅವರು ಲಸಿಕೆ ಪಡೆದುಕೊಂಡಿದ್ದಾರೆ.

ಜನಪ್ರತಿನಿಧಿಗಳೂ ಹಾಗೂ ಸಚಿವರು ಕೊರೊನಾ ಲಸಿಕೆಗಳನ್ನು ಹಾಕಿಸಿಕೊಂಡ ಬಳಿಕ ಇತ್ತೀಚಿನ ದಿನಗಳಲ್ಲಿ ಲಸಿಕೆ ಹಾಕಿಸಿಕೊಳ್ಳುತ್ತಿರುವವರ ಪ್ರಮಾಣ ಹೆಚ್ಚಾಗುತ್ತಿದೆ. ಈವರೆಗೂ ದೇಶದಲ್ಲಿ ಒಟ್ಟಾರೆ 2,61,64,920 ಮಂದಿ ಲಸಿಕೆಯನ್ನು ಪಡೆದುಕೊಂಡಿದ್ದಾರೆ. (ಎಂ.ಎನ್)

Leave a Reply

comments

Related Articles

error: