ದೇಶಪ್ರಮುಖ ಸುದ್ದಿ

ಪುಣೆಯ ಶಿವಾಜಿ ಮಾರುಕಟ್ಟೆಯಲ್ಲಿ ಬೆಂಕಿ: 25 ಅಂಗಡಿಗಳು ನಾಶ

ಪುಣೆ,ಮಾ.16-ಮಹಾರಾಷ್ಟ್ರದ ಪುಣೆಯ ಹಣ್ಣು ಮತ್ತು ತರಕಾರಿಯ ಹಳೆಯ ಮಾರುಕಟ್ಟೆಯೊಂದರಲ್ಲಿ ಇಂದು ಬೆಳಿಗ್ಗೆ ದೊಡ್ಡ ಪ್ರಮಾಣದಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಅವಘಡದಲ್ಲಿ 25 ಅಂಗಡಿಗಳು ನಾಶವಾಗಿದೆ.

ಪುಣೆಯ ಪ್ರಸಿದ್ಧ ಶಿವಾಜಿ ಮಾರುಕಟ್ಟೆಯಲ್ಲಿ ಇಂದು ನಸುಕಿನ 4 ಗಂಟೆಗೆ ಬೆಂಕಿ ಕಾಣಿಸಿಕೊಂಡಿದ್ದು, ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಆದರೆ 25 ಅಂಗಡಿಗಳು ಸುಟ್ಟು ಹೋಗಿವೆ ಎಂದು ಅಗ್ನಿಶಾಮಕ ದಳದ ಅಧಿಕಾರಿಗಳು ತಿಳಿಸಿದ್ದಾರೆ.

ನಮಗೆ ಈ ಬಗ್ಗೆ ಮಾಹಿತಿ ಸಿಕ್ಕ ಕೂಡಲೇ ಒಂಬತ್ತು ನೀರಿನ ಟ್ಯಾಂಕರ್‌ಗಳನ್ನು ಘಟನಾ ಸ್ಥಳಕ್ಕೆ ಕಳುಹಿಸಿದೆವು. ಅಗ್ನಿ ಶಾಮಕ ದಳ ಸಿಬ್ಬಂದಿಯು ಅರ್ಧ ಗಂಟೆಗೊಳಗೆ ಬೆಂಕಿ ನಂದಿಸುವಲ್ಲಿ ಸಫಲರಾದರು. ಈ ಬೆಂಕಿ ಅವಘಡದಲ್ಲಿ ಯಾರಿಗೂ ಗಾಯಗಳಾಗಿಲ್ಲ. ಬೆಂಕಿ ಹೇಗೆ ಕಾಣಿಸಿಕೊಂಡಿತು ಎಂಬುದರ ಬಗ್ಗೆ ಮಾಹಿತಿ ಲಭ್ಯವಿಲ್ಲ ಎಂದು ಪುಣೆ ಮಹಾನಗರ ಪಾಲಿಕೆಯ ಅಗ್ನಿಶಾಮಕ ವಿಭಾಗದ ಮುಖ್ಯಸ್ಥ ಪ್ರಶಾಂತ್‌ ರಾನ್‌ಪೈಸ್ ಮಾಹಿತಿ ನೀಡಿದರು. (ಏಜೆನ್ಸೀಸ್, ಎಂ.ಎನ್)

Leave a Reply

comments

Related Articles

error: