ದೇಶಪ್ರಮುಖ ಸುದ್ದಿ

ಕೇಂದ್ರ ಸಚಿವ ಡಿ.ವಿ.ಸದಾನಂದ ಗೌಡ ಅವರ ಜನ್ಮದಿನ: ಶುಭಕೋರಿದ ಪ್ರಧಾನಿ ಮೋದಿ

ನವದೆಹಲಿ,ಮಾ.18-ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ಸಚಿವ ಡಿ.ವಿ.ಸದಾನಂದಗೌಡ ಅವರು ಜನ್ಮದಿನದ ಸಂಭ್ರಮದಲ್ಲಿದ್ದಾರೆ. ಅವರಿಗೆ ಪ್ರಧಾನಿ ನರೇಂದ್ರ ಮೋದಿ ಶುಭಾಶಯ ಕೋರಿದ್ದಾರೆ.

ಮೋದಿ ಅವರು, ಕೇಂದ್ರ ಸಚಿವ ಡಿವಿ ಸದಾನಂದ ಗೌಡ ಅವರಿಗೆ ಜನ್ಮದಿನದ ಶುಭಾಶಯಗಳು. ಅನುಭವಿ ನಾಯಕರಾಗಿರುವ ಅವರು ನಮ್ಮ ಪಕ್ಷವನ್ನು ತಳಮಟ್ಟದಿಂದ ಬಲಪಡಿಸಲು ಶ್ರಮಿಸಿದ್ದಾರೆ. ರಾಸಾಯನಿಕ ಮತ್ತು ರಸಗೊಬ್ಬರ ಕ್ಷೇತ್ರದ ಅಭಿವೃದ್ಧಿಯನ್ನು ಖಚಿತಪಡಿಸುವ ಸಲುವಾಗಿ ಅವರು ಮುಂಚೂಣಿಯಲ್ಲಿ ನಿಂತಿದ್ದಾರೆ. ಅವರ ದೀರ್ಘಾಯುಷ್ಯಕ್ಕಾಗಿ ಪ್ರಾರ್ಥಿಸುತ್ತೇನೆ ಎಂದು ಟ್ವೀಟ್ ಮಾಡಿದ್ದಾರೆ. (ಏಜೆನ್ಸೀಸ್, ಎಂ.ಎನ್)

Leave a Reply

comments

Related Articles

error: