ಕರ್ನಾಟಕಪ್ರಮುಖ ಸುದ್ದಿಮೈಸೂರು

ಹಿರಿಯ ಸಾಹಿತಿ ಡಾ.ಮಳಲಿ ವಸಂತ್ ಕುಮಾರ್ ನಿಧನ : ಸಚಿವ ಎಸ್.ಟಿ.ಸೋಮಶೇಖರ್ ಅಂತಿಮ ದರ್ಶನ

ಮೈಸೂರು,ಮಾ.19:- ಮೈಸೂರು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ನ ಮಾಜಿ ಅಧ್ಯಕ್ಷ ವಿಶ್ರಾಂತ ಕನ್ನಡ ಪ್ರಾಧ್ಯಾಪಕ , ಹಿರಿಯ ಸಾಹಿತಿ ಡಾ.ಮಳಲಿ ವಸಂತ್ ಕುಮಾರ್  ನಿನ್ನೆ ಸಂಜೆ ಬೆಂಗಳೂರಿನಲ್ಲಿರುವ ಅವರ ಮಗನ ನಿವಾಸದಲ್ಲಿ ನಿಧನ ಹೊಂದಿದ್ದಾರೆ.

ಇಂದು ಬೆಳಿಗ್ಗೆ ಅವರ ಪಾರ್ಥೀವ ಶರೀರವನ್ನು ಬೆಂಗಳೂರಿನಿಂದ ಮೈಸೂರಿಗೆ ತರಲಾಗಿದ್ದು, ಮೈಸೂರಿನ ಪುರಭವನದ ಎದುರು ಬೆಳಿಗ್ಗೆ 9ರಿಂದ 10ಗಂಟೆಯವರೆಗೆ ಅವರ ಪಾರ್ಥೀವ ಶರೀರವನ್ನು ಸಾರ್ವಜನಿಕರ ದರ್ಶನಕ್ಕೆ ಇರಿಸಲಾಗಿತ್ತು. ಸಹಕಾರ ಮತ್ತು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್ ಅವರು ಅಂತಿಮ ದರ್ಶನವನ್ನು ಪಡೆದರಲ್ಲದೆ, ಕುಟುಂಬಿಕರಿಗೆ ಸಾಂತ್ವನ ಹೇಳಿದರು. ಇದೇ ವೇಳೆ ಮುಡಾ ಅಧ್ಯಕ್ಷರಾದ ಹೆಚ್.ವಿ.ರಾಜೀವ್, ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ, ಕಸಾಪ ಜಿಲ್ಲಾ ಮಾಜಿ ಅಧ್ಯಕ್ಷ ಎಂ.ಚಂದ್ರಶೇಖರ್, ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾಧ್ಯಕ್ಷ ಡಾ.ವೈ.ಡಿ.ರಾಜಣ್ಣ ಅವರು ಇದೇ ವೇಳೆ ಅಂತಿಮ ದರ್ಶನ ಪಡೆದರು.

ಕೆಲವು ಕಾಲದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಪತ್ನಿ ಶಾಂತಾ ಮಳಲಿ, ಪುತ್ರಿ ರೂಪ, ಪುತ್ರ ರನ್ನ ಸೇರಿದಂತೆ ಬಂಧುಮಿತ್ರರು, ಶಿಷ್ಯವರ್ಗ ಹಾಗೂ ಬಂಧು ಮಿತ್ರರು, ಅಪಾರ ಅಭಿಮಾನಿ ಬಳಗವನ್ನು ಅಗಲಿದ್ದಾರೆ.

ಅವರ ಅಂತ್ಯಕ್ರಿಯೆಯು ಮೈಸೂರಿನ ಕಳಲವಾಡಿಯಲ್ಲಿರುವ ಅವರ ಭೂಮಿತಾಯಿ ತೋಟದಲ್ಲಿ ಇಂದು ನೆರವೇರಲಿದೆ.  (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: