ಕರ್ನಾಟಕಪ್ರಮುಖ ಸುದ್ದಿ

‘ಪರೀಕ್ಷಾ ಪೇ ಚರ್ಚಾ’ಗೆ ಅಲ್ಬಾಡಿ-ಆರ್ಡಿ ಶಾಲೆಯ ವಿದ್ಯಾರ್ಥಿನಿ ಅನುಷಾ ಆಯ್ಕೆ: ಅಭಿನಂದನೆ ಸಲ್ಲಿಸಿದ ಸಚಿವ ಸುರೇಶ್ ಕುಮಾರ್

ಕುಂದಾಪುರ,ಮಾ.19-ಪ್ರಧಾನಿ ನರೇಂದ್ರ ಮೋದಿ ನಡೆಸಿಕೊಡುವ ‘ಪರೀಕ್ಷಾ ಪೇ ಚರ್ಚಾ’ ಸಂವಾದ ಕಾರ್ಯಕ್ರಮಕ್ಕೆ ಅಲ್ಬಾಡಿ-ಆರ್ಡಿ ಚಾರಮಕ್ಕಿ ನಾರಾಯಣ ಶೆಟ್ಟಿ ಸ್ಮಾರಕ ಸರಕಾರಿ ಪ್ರೌಢಶಾಲೆಯ ವಿದ್ಯಾರ್ಥಿನಿ ಅನುಷಾ ಆಯ್ಕೆಯಾಗಿದ್ದಾರೆ.

ದೇಶದ ವಿವಿಧೆಡೆಯಿಂದ 10.39 ಲಕ್ಷ ವಿದ್ಯಾರ್ಥಿಗಳು `ಪರೀಕ್ಷಾ ಪೇ ಚರ್ಚಾ’ ಕಾರ್ಯಕ್ರಮದಲ್ಲಿ ಭಾಗಿ ಆಗಲು ಅರ್ಜಿ ಸಲ್ಲಿಸಿದ್ದರು. ಅದರಲ್ಲಿ 1,500 ವಿದ್ಯಾರ್ಥಿಗಳು ಸಂವಾದ ಕಾರ್ಯಕ್ರಮ ವೀಕ್ಷಿಸಲು ಆಯ್ಕೆಯಾಗಿದ್ದಾರೆ. ಇವರಲ್ಲಿ ಕೇವಲ 30 ವಿದ್ಯಾರ್ಥಿಗಳು ಮಾತ್ರ ಪ್ರಧಾನಿ ಜತೆಗೆ ಮಾತನಾಡಲಿದ್ದಾರೆ. ಇದಕ್ಕೆ ಅನುಷಾ ಆಯ್ಕೆಯಾಗಿದ್ದಾರೆ.

ದೇಶಾದ್ಯಂತ ಆಯ್ಕೆಯಾಗಿರುವ ಮೂವತ್ತು ಶಾಲೆಗಳಲ್ಲಿ ಆರ್ಡಿ- ಅಲ್ಬಾಡಿ ಶಾಲೆಯೂ ಒಂದು. ಕರ್ನಾಟಕದಿಂದ ಬೆಂಗಳೂರಿನ ಒಂದು ಮತ್ತು ಆರ್ಡಿ ಶಾಲೆ ಮಾತ್ರ ಆಯ್ಕೆಯಾಗಿವೆ.

ಗುಡ್ಡೆಯಂಗಡಿ ನಿವಾಸಿ ಕೃಷ್ಣ ಕುಲಾಲ್‌-ಜಯಲಕ್ಷ್ಮೀ ದಂಪತಿಯ ಪುತ್ರಿ ಅನುಷಾ ಅಲ್ಬಾಡಿ-ಆರ್ಡಿ ಶಾಲೆಯ 10ನೇ ತರಗತಿ ವಿದ್ಯಾರ್ಥಿನಿ. ಈಕೆ ಭವಿಷ್ಯದಲ್ಲಿ ಎಂಜಿನಿಯರಿಂಗ್‌ ಮಾಡುವ ಕನಸು ಹೊಂದಿದ್ದಾರೆ.

ಅನುಷಾ ಅವರಿಗೆ ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರು ಅಭಿನಂದನೆ ಸಲ್ಲಿಸಿದ್ದಾರೆ. ಅನುಷಾಗೆ ಕರೆ ಮಾಡಿದ ಸಚಿವರು, ಪ್ರಧಾನಿಯವರ ಜೊತೆ ಮಾತನಾಡಲು ನೀನು ಆಯ್ಕೆಯಾಗಿರುವುದು ನಮಗೆ ಖುಷಿಯಾಗಿದೆ. ನೀನು ಶಾಲೆಗೆ ಮತ್ತು ರಾಜ್ಯಕ್ಕೆ ಹೆಮ್ಮೆ ತರಬೇಕು ಎಂದು ಹೇಳಿದ್ದಾರೆ. (ಎಂ.ಎನ್)

Leave a Reply

comments

Related Articles

error: