ದೇಶಪ್ರಮುಖ ಸುದ್ದಿ

ಮಹಾರಾಷ್ಟ್ರದ ಕೆಮಿಕಲ್ ಫ್ಯಾಕ್ಟರಿಯಲ್ಲಿ ಬೆಂಕಿ ಅವಘಡ: ನಾಲ್ವರ ಸಾವು

ಮುಂಬೈ,ಮಾ.20-ಕೆಮಿಕಲ್ ಫ್ಯಾಕ್ಟರಿಯೊಂದರಲ್ಲಿ ಬೆಂಕಿ ಅವಘಡ ಸಂಭವಿಸಿ ನಾಲ್ವರು ಕಾರ್ಮಿಕರು ಸಾವನ್ನಪ್ಪಿ, ಒಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದೆ.

ಮಹಾರಾಷ್ಟ್ರದ ಡೊಂಬಿವ್ಲಿಯ ಎಂಐಡಿಸಿಯ ಹಂತ 1ರ ಘರ್ಡಾ ಕೆಮಿಕಲ್ ಫ್ಯಾಕ್ಟರಿಯಲ್ಲಿ ಬೆಂಕಿ ಅವಘಡ ಸಂಭವಿಸಿದೆ. ಗಂಭೀರವಾಗಿ ಗಾಯಗೊಂಡಿರುವವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ.

ಘಟನೆ ನಡೆದ ವೇಳೆ 30 ಮಂದಿ ಈ ಪ್ಲ್ಯಾಂಟ್‌ನಲ್ಲಿ ಕೆಲಸ ಮಾಡುತ್ತಿದ್ದರು. ಮೇಲ್ನೋಟಕ್ಕೆ ಶಾರ್ಟ್‌ ಸರ್ಕ್ಯೂಟ್‌ನಿಂದ ಅವಘಡ ಸಂಭಿಸಿರುವುದು ತಿಳಿದುಬಂದಿದೆ. ಆದರೆ ಸಂಸ್ಥೆ ಕೂಡ ಈ ಬಗ್ಗೆ ಆಂತರಿಕ ತನಿಖೆ ನಡೆಸುತ್ತಿದೆ. ಈ ಸಂಬಂಧ ದೂರು ದಾಖಲಾಗಿದೆ.

ಕಲ್ಯಾಣ್-ಡೊಂಬಿವ್ಲಿ ಮುನ್ಸಿಪಲ್ ಕಾರ್ಪೊರೇಶನ್‌ನ ಅಗ್ನಿಶಾಮಕ ಅಧಿಕಾರಿ ದಿಲೀಪ್ ಗುಂಡ್, ನಮಗೆ 1.50ರ ಸುಮಾರಿಗೆ ಕರೆ ಬಂತು. ಕೂಡಲೇ ನಾವು ಸ್ಥಳಕ್ಕೆ ತೆರಳಿ ತಕ್ಷಣ ಕಾರ್ಯಾಚರಣೆ ಮೂಲಕ ಬೆಂಕಿ ನಿಯಂತ್ರಿಸಿದೆವು. ಒಟ್ಟು 10 ಅಗ್ನಿಶಾಮಕ ದಳಗಳಿಂದ ಕಾರ್ಯಾಚರಣೆ ನಡೆಯಿತು. ಘಟನೆಯಲ್ಲಿ ಇಬ್ಬರು ನೌಕರರು ಸ್ಥಳದಲ್ಲೇ ಸಾವನ್ನಪ್ಪಿದರು ಮತ್ತು ಇತರ ಐವರಿಗೆ ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಅವರು ಮಾಹಿತಿ ನೀಡಿದರು. (ಏಜೆನ್ಸೀಸ್, ಎಂ.ಎನ್)

Leave a Reply

comments

Related Articles

error: