ಕರ್ನಾಟಕಪ್ರಮುಖ ಸುದ್ದಿ

ರಾಜ್ಯದಲ್ಲಿ 1,715 ಕೊರೋನಾ ಪಾಸಿಟಿವ್ ಪ್ರಕರಣ ಪತ್ತೆ

ರಾಜ್ಯ(ಬೆಂಗಳೂರು)ಮಾ.22:- ರಾಜ್ಯದಲ್ಲಿ ಕೊರೋನಾ 2ನೇ ಅಲೆಯ ಆರ್ಭಟ ಮುಂದುವರೆದಿದ್ದು 1,715 ಪಾಸಿಟಿವ್ ಪ್ರಕರಣಗಳು ವರದಿಯಾಗಿವೆ. ಇದರೊಂದಿಗೆ ಸೋಂಕಿತರ ಸಂಖ್ಯೆ 9,70,202ಕ್ಕೆ ಏರಿಕೆಯಾಗಿದೆ.

ಕಳೆದ 24 ಗಂಟೆಯಲ್ಲಿ ರಾಜ್ಯದಲ್ಲಿ ಕೊರೋನಾ ಸೋಂಕಿನಿಂದ ಇಬ್ಬರು ಸೋಂಕಿತರು ಮೃತಪಟ್ಟಿದ್ದು, ಸಾವಿನ ಸಂಖ್ಯೆ 12,434ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.
ಬೆಂಗಳೂರಿನಲ್ಲಿ 1,039 ಮಂದಿಗೆ ಸೋಂಕು ದೃಢಪಟ್ಟಿದ್ದು, ಇದರೊಂದಿಗೆ ಸೋಂಕಿತರ ಸಂಖ್ಯೆ 4,17,672ಕ್ಕೆ ಏರಿಕೆಯಾಗಿದೆ. ಇನ್ನು ನಗರದಲ್ಲಿ ಸೋಂಕಿಗೆ ಆರು ಮಂದಿ ಬಲಿಯಾಗಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.

ರಾಜ್ಯದಲ್ಲಿ 1,048 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 9,44,256 ಕ್ಕೆ ಏರಿಕೆಯಾಗಿದೆ. ಇನ್ನು 12,434 ಸಕ್ರಿಯ ಪ್ರಕರಣಗಳಿದ್ದು, ಈ ಪೈಕಿ 137 ಮಂದಿ ಕೋವಿಡ್ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

Leave a Reply

comments

Related Articles

error: