ದೇಶಪ್ರಮುಖ ಸುದ್ದಿ

ಉತ್ತರಾಖಂಡ್ ಸಿಎಂ ತೀರಥ್ ಸಿಂಗ್ ರಾವತ್ ಗೆ ಕೋವಿಡ್ ಪಾಸಿಟಿವ್

ನವದೆಹಲಿ,ಮಾ.22- ಉತ್ತರಾಖಂಡ್ ಮುಖ್ಯಮಂತ್ರಿ ತೀರಥ್ ಸಿಂಗ್ ರಾವತ್ ಅವರಿಗೆ ಕೋವಿಡ್ 19 ಸೋಂಕು ತಗುಲಿರುವುದು ದೃಢಪಟ್ಟಿದೆ. ಸದ್ಯ ತೀರಥ್ ಸಿಂಗ್ ರಾವ್ ಅವರನ್ನು ಐಸೋಲೇಷನ್​ನಲ್ಲಿರಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ತಮಗೆ ಕೊರೊನಾ ವೈರಸ್ ಸೋಂಕು ತಗುಲಿರುವ ಬಗ್ಗೆ ಸ್ವತಃ ತೀರಥ್ ಸಿಂಗ್ ರಾವತ್ ಅವರು ಟ್ವೀಟ್ ಮಾಡಿದ್ದಾರೆ. ನನ್ನ ಕೊರೊನಾ ಪರೀಕ್ಷಾ ವರದಿ ಧನಾತ್ಮಕವಾಗಿ ಬಂದಿದೆ. ನಾನು ಚೆನ್ನಾಗಿದ್ದೇನೆ ಮತ್ತು ನನಗೆ ಯಾವುದೇ ಸಮಸ್ಯೆ ಇಲ್ಲ. ವೈದ್ಯರ ಮೇಲ್ವಿಚಾರಣೆಯಲ್ಲಿ ನಾನು ಸ್ವಯಂಪ್ರೇರಿತವಾಗಿ ಪ್ರತ್ಯೇಕವಾಗಿದ್ದೇನೆ. ಕಳೆದ ಕೆಲವು ದಿನಗಳಿಂದ ನನ್ನೊಂದಿಗೆ ನಿಕಟ ಸಂಪರ್ಕದಲ್ಲಿ ಇದ್ದವರು ದಯವಿಟ್ಟು ಜಾಗರೂಕರಾಗಿರಿ ಮತ್ತು ಕೊರೊನಾ ವೈರಸ್ ಸೋಂಕಿತ ತಪಾಸಣೆಗೆ ಒಳಗಾಗಬೇಕು ಎಂದು ಮನವಿ ಮಾಡಿಕೊಂಡಿದ್ದಾರೆ. ಹಾಗೇ ನಾನು ಎಲ್ಲರ ಉತ್ತಮ ಆರೋಗ್ಯವನ್ನು ಬಯಸುತ್ತೇನೆ ಎಂದೂ ಹೇಳಿದ್ದಾರೆ.

ರಾವತ್​ ಅವರು ಇಂದು ನವದೆಹಲಿಗೆ ನಾಲ್ಕು ದಿನಗಳ ಪ್ರವಾಸ ಕೈಗೊಳ್ಳುವ ಕಾರ್ಯಕ್ರಮವಿತ್ತು. ದೆಹಲಿಯಲ್ಲಿ, ಪ್ರಧಾನಿ ಮೋದಿ, ಅಮಿತ್ ಷಾ ಮತ್ತು ಇತರ ಸಂಪುಟ ಸಚಿವರನ್ನು ಭೇಟಿಯಾಗಬೇಕಿತ್ತು. ಅದಕ್ಕೂ ಮುಂಚೆ ಕರೊನಾ ಪರೀಕ್ಷೆಯ ಫಲಿತಾಂಶ ಪಾಸಿಟಿವ್ ಬಂದಿದ್ದು, ದೆಹಲಿ ಪ್ರವಾಸವನ್ನು ರದ್ದುಗೊಳಿಸಿ ತಮ್ಮ ನಿವಾಸದಲ್ಲೇ ಐಸೋಲೇಷನ್ ನಲ್ಲಿದ್ದಾರೆ.

ಭಾನುವಾರದಂದು ಸಿಎಂ ರಾವತ್, ರಾಮನಗರ ಮತ್ತು ಡೆಹರಾಡೂನ್ ಜಿಲ್ಲೆಯಲ್ಲಿ ನಡೆದ ಹಲವು ಕಾರ್ಯಕ್ರಮಗಳಲ್ಲಿ ಭಾಗವಹಿಸಿದ್ದಲ್ಲದೆ ಗರ್ಜಿಯಾ ಮಂದಿರಕ್ಕೆ ಕೂಡ ಭೇಟಿ ನೀಡಿದ್ದರು. ಶನಿವಾರ ಹರಿದ್ವಾರದಲ್ಲಿ ಗಂಗಾಪೂಜೆ ಮಾಡಿದ ರಾವತ್ ಹಲವು ಸಂತರನ್ನು ಭೇಟಿ ಮಾಡಿದ್ದರು.

ಕಳೆದೆರಡು ದಿನಗಳಲ್ಲಿ ರಾವತ್ ರಾಜ್ಯದ ಹಲವು ಸಾರ್ವಜನಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸಿದ್ದು, ಅವರ ನಿಕಟ ಸಂಪರ್ಕಕ್ಕೆ ಬಂದ ಸಚಿವರು, ಅಧಿಕಾರಿಗಳು ಮತ್ತು ಇತರ ಜನರ ಕೊರೊನಾ ಪರೀಕ್ಷೆ ನಡೆಸಲಾಗುತ್ತಿದೆ. (ಏಜೆನ್ಸೀಸ್, ಎಂ.ಎನ್)

Leave a Reply

comments

Related Articles

error: