ಕರ್ನಾಟಕಪ್ರಮುಖ ಸುದ್ದಿ

ಯಲ್ಲಾಪುರದಲ್ಲಿ ಭೀಕರ ರಸ್ತೆ ಅಪಘಾತ: ಓರ್ವ ಮಹಿಳೆ ಸಾವು; ಇಬ್ಬರ ಸ್ಥಿತಿ ಗಂಭೀರ

ಯಲ್ಲಾಪುರ,ಮಾ.23-ಬುಲೆರೋ ವಾಹನಕ್ಕೆ ಎರಡು ಲಾರಿಗಳು ಡಿಕ್ಕಿ ಹೊಡೆದ ಪರಿಣಾಮ ಓರ್ವ ಮಹಿಳೆ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕು ಅರಬೈಲ್ ಘಟ್ಟದಲ್ಲಿ ನಡೆದಿದೆ.

ಬುಲೆರೋ ವಾಹನದಲ್ಲಿ ಬಾಗಲಕೋಟೆಯ ಲೋಕಾಪುರದ 8 ಜನರು ಗೋಕರ್ಣಕ್ಕೆ ಹೋಗುತ್ತಿದ್ದಾಗ ಬುಲೆರೋಗೆ ಹಿಂದಿನಿಂದ ಬಂದ ಲಾರಿ ಡಿಕ್ಕಿಹೊಡೆದಿದ್ದು, ಡಿಕ್ಕಿಯ ರಭಸಕ್ಕೆ ಎದುರಿನಿಂದ ಬರುತ್ತಿದ್ದ ಟಿಪ್ಪರ್​ಗೂ ಬುಲೆರೋ ತಾಗಿದೆ. ಲಾರಿ ಮತ್ತು ಟಿಪ್ಪರ್ ನಡುವೆ ಸಿಕ್ಕ ಬುಲೆರೋ ನಜ್ಜುಗುಜ್ಜಾಗಿದೆ.

ಘಟನೆಯಲ್ಲಿ ಮಹಿಳೆ ಸ್ಥಳದಲ್ಲೇ ಮೃತಪಟ್ಟು ಇಬ್ಬರು ಮಹಿಳೆಯರು ಗಂಭೀರವಾಗಿ ಗಾಯಗೊಂಡಿದ್ದಾರೆ. ಉಳಿದವರಿಗೆ ಸಣ್ಣಪುಟ್ಟ ಗಾಯಾಗಳಾಗಿವೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. (ಎಂ.ಎನ್)

Leave a Reply

comments

Related Articles

error: