ಕರ್ನಾಟಕಪ್ರಮುಖ ಸುದ್ದಿ

ರಾಜ್ಯದಲ್ಲಿ ದಾಖಲೆಯ 2,010 ಕೊರೋನಾ ಪಾಸಿಟಿವ್ ಪ್ರಕರಣ ಪತ್ತೆ

ರಾಜ್ಯ( ಬೆಂಗಳೂರು)ಮಾ.24:- ರಾಜ್ಯದಲ್ಲಿ ಕೊರೋನಾ 2ನೇ ಅಲೆಯ ಅಬ್ಬರ ಮುಂದುವರೆದಿದ್ದು ರಾಜ್ಯಾದ್ಯಂತ ಮತ್ತೆ ದಾಖಲೆಯ 2,010 ಪಾಸಿಟಿವ್ ಪ್ರಕರಣಗಳು ವರದಿಯಾಗಿವೆ. ಇದರೊಂದಿಗೆ ಸೋಂಕಿತರ ಸಂಖ್ಯೆ 9,73,657ಕ್ಕೆ ಏರಿಕೆಯಾಗಿದೆ.
ಕಳೆದ 24 ಗಂಟೆಯಲ್ಲಿ ರಾಜ್ಯದಲ್ಲಿ ಕೊರೋನಾ ಸೋಂಕಿನಿಂದ 5 ಮಂದಿ ಸೋಂಕಿತರು ಮೃತಪಟ್ಟಿದ್ದು, ಸಾವಿನ ಸಂಖ್ಯೆ 12,449ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.
ಬೆಂಗಳೂರಿನಲ್ಲಿ 1,280 ಮಂದಿಗೆ ಸೋಂಕು ದೃಢಪಟ್ಟಿದ್ದು, ಇದರೊಂದಿಗೆ ಸೋಂಕಿತರ ಸಂಖ್ಯೆ 4,19,838ಕ್ಕೆ ಏರಿಕೆಯಾಗಿದೆ. ನಗರದಲ್ಲಿ ಸೋಂಕಿಗೆ ಮೂರು ಮಂದಿ ಬಲಿಯಾಗಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.

ರಾಜ್ಯದಲ್ಲಿ 677 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 9,45,594ಕ್ಕೆ ಏರಿಕೆಯಾಗಿದೆ. 15,595 ಸಕ್ರಿಯ ಪ್ರಕರಣಗಳಿದ್ದು, ಈ ಪೈಕಿ 136 ಮಂದಿ ಕೋವಿಡ್ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

Leave a Reply

comments

Related Articles

error: