ಮೈಸೂರು

ಮೈಸೂರು ಜಿಲ್ಲೆಯಲ್ಲಿ ಹೊಸದಾಗಿ 100ಮಂದಿಯಲ್ಲಿ ಕೊರೋನಾ ಸೋಂಕು

ಮೈಸೂರು,ಮಾ.24:- ಮೈಸೂರು ಜಿಲ್ಲೆಯಲ್ಲಿ ಹೊಸದಾಗಿ 100ಮಂದಿಯಲ್ಲಿ ಕೊರೋನಾ ವೈರಸ್ ಸೋಂಕು ಪ್ರಕರಣ ಪತ್ತೆಯಾಗಿದೆ.

ಇದೀಗ ಸಕ್ರಿಯ ಪ್ರಕರಣಗಳ ಸಂಖ್ಯೆ 416ಕ್ಕೆ ಏರಿಕೆಯಾಗಿದೆ. ಕಳೆದ ಡಿಸೆಂಬರ್ ಬಳಿಕ ಮೈಸೂರಿನಲ್ಲಿ 24ಗಂಟೆಗಳ ಅವಧಿಯಲ್ಲಿ ಕೋವಿಡ್ ಪ್ರಕರಣ ಶತಕದ ಗಡಿ ದಾಟಿದ್ದು ಇದೇ ಮೊದಲು. ರೋಗಿಗಳ ಸಂಪರ್ಕಕ್ಕೆ ಬಂದ 78ಮಂದಿ ಶೀತ ಜ್ವರ ಮಾದರಿಯ ಅನಾರೋಗ್ಯದ ಲಕ್ಷಣಗಳಿಂದ ಬಳಲುತ್ತಿದ್ದ 17ಮಂದಿ, ತೀವ್ರ ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ ಐವರಲ್ಲಿ ಕೋವಿಡ್ ಸೋಂಕು ಕಾಣಿಸಿಕೊಂಡಿದೆ.

124ಮಂದಿ ಮನೆಗಳಲ್ಲೇ ಐಸೋಲೇಷನ್ ಆಗಿದ್ದಾರೆ. ಸರ್ಕಾರಿ ಆಸ್ಪತ್ರೆಯಲ್ಲಿ 85ಮಂದಿ, ಖಾಸಗಿ ಆಸ್ಪತ್ರೆಯಲ್ಲಿ 169ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: