ಮೈಸೂರು

ವಿಟಿಯು ನಿಧಾನಗತಿಯ ಫಲಿತಾಂಶ ವಿರೋಧಿಸಿ ಎಬಿವಿಪಿ ಪ್ರತಿಭಟನೆ

ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯದ  ನಿಧಾನಗತಿಯ ಫಲಿತಾಂಶ ಪ್ರಕ್ರಿಯೆಯನ್ನು ಖಂಡಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ವತಿಯಿಂದ  ಪ್ರತಿಭಟನೆ ನಡೆಯಿತು.

ಮೈಸೂರಿನ ರಾಮಸ್ವಾಮಿ ವೃತ್ತದಲ್ಲಿ ಜಮಾಯಿಸಿದ್ದ ಪ್ರತಿಭಟನಾಕಾರರು, ವಿಟಿಯು ಕಳೆದ ಡಿಸೆಂಬರ್ ಮತ್ತು ಜನವರಿಯಲ್ಲಿ ನಡೆಸಿದ ಪರೀಕ್ಷೆಯ ಫಲಿತಾಂಶವನ್ನು 3 ತಿಂಗಳು ಕಳೆದರೂ ಪ್ರಕಟಿಸಿಲ್ಲ. ಈ ಘಟನೆಯಿಂದ ರಾಜ್ಯದ ಲಕ್ಷಾಂತರ ಇಂಜಿನಿಯರಿಂಗ್ ವಿದ್ಯಾರ್ಥಿಗಳು ಗೊಂದಲಕ್ಕೀಡಾಗಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಈ ರೀತಿಯ ನಿಧಾನಗತಿಯ ಫಲಿತಾಂಶದಿಂದ ವಿದ್ಯಾರ್ಥಿಗಳ ಮುಂದಿನ ವಿದ್ಯಾಭ್ಯಾಸಕ್ಕೆ ತೊಂದರೆಯಾಗುತ್ತದೆ. ಮುಂದಿನ ದಿನಗಳಲ್ಲಿ ಫಲಿತಾಂಶದ ನಂತರ ಮರು ಮೌಲ್ಯಮಾಪನ  ಕುರಿತಂತೆ ಮತ್ತೆ ಗೊಂದಲಗಳು ಮರುಕಳಿಸದಂತೆ ಎಚ್ಚರ ವಹಿಸುವುದರ ಜೊತೆ  ತಕ್ಷಣವೇ ಫಲಿತಾಂಶವನ್ನು ಪ್ರಕಟಿಸಿ ನಂತರದ ದಿನಗಳಲ್ಲಿ ಎದುರಾಗುವ ಯಾವುದೇ ಗೊಂದಲಗಳಿಗೆ ಸಿಲುಕದೆ ಸುವ್ಯವಸ್ಥಿತವಾಗಿ ಫಲಿತಾಂಶ ಪ್ರಕ್ರಿಯೆಯನ್ನು ನಡೆಸಬೇಕೆಂದು  ಆಗ್ರಹಿಸಿದರು. ಇಲ್ಲವಾದರೆ ಮುಂದಿನ ದಿನಗಳಲ್ಲಿ ಎಬಿವಿಪಿ ಉಗ್ರ ಹೋರಾಟ ನಡೆಸಲಿದೆ  ಮತ್ತು ವಿವಿಗೆ ಮುತ್ತಿಗೆ ಹಾಕಲಾಗುತ್ತದೆ ಎಂದು ಎಚ್ಚರಿಸಿದರು.

ಪರಿಷತ್ ನ ನಗರ ಕಾರ್ಯದರ್ಶಿ ಶರತ್, ಜಿಲ್ಲಾ ಸಂಚಾಲಕ ಶಿವಕುಮಾರ್ ಮತ್ತಿತರರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು. (ಎಲ್.ಜಿ-ಎಸ್.ಎಚ್)

Leave a Reply

comments

Related Articles

error: