ಮೈಸೂರು

ಬಡ್ತಿ ಮೀಸಲಾತಿ ಉಳಿವಿಗಾಗಿ ಪ್ರತಿಭಟನೆ

ಮೈಸೂರು ವಿಶ್ವವಿದ್ಯಾನಿಲಯದ ದಲಿತ ನೌಕರರ ಸಂಘದ ವತಿಯಿಂದ ಮೈಸೂರು ಕಾರ್ಯಸೌಧದ ಎದುರು ಒಬಿಸಿ/ಎಸ್/ಎಸ್.ಟಿ ಬಡ್ತಿ ಮೀಸಲಾತಿ ಉಳಿವಿಗಾಗಿ ಬೃಹತ್ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿತ್ತು.

ಪ್ರತಿಭಟನೆಯಲ್ಲಿ ಪಾಲ್ಗೊಂಡ ಪ್ರತಿಭಟನಾಕಾರರು ಮಾತನಾಡಿ ರಾಜ್ಯಾದ್ಯಂತ ಬಡ್ತಿ ಮೀಸಲಾತಿ ಉಳಿವಿಗಾಗಿ ಬೃಹತ್ ಪ್ರತಿಭಟನಾ ಮೆರವಣಿಗೆಯನ್ನು ಹಮ್ಮಿಕೊಳ್ಳಲಾಗಿದ್ದು,ಅವರ ಪ್ರತಿಭಟನೆಗೆ ಬೆಂಬಲ ಸೂಚಿಸಿ ದಲಿತ ನೌಕರರೆಲ್ಲರೂ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದೇವೆ ಎಂದರು. ಸುಪ್ರೀಂಕೋರ್ಟ್ ತೀರ್ಪಿನ ಮಾರ್ಪಾಡಿಗೆ ಸುಗ್ರೀವಾಜ್ಞೆ ಹೊರಡಿಸಬೇಕು ಎಂದು ತಿಳಿಸಿದರು. ಸಂವಿಧಾನಾತ್ಮಕ ಹಕ್ಕುಗಳ ರಕ್ಷಣೆಯಾಗಬೇಕು ಎಂದು ಒತ್ತಾಯಿಸಿದರು.

ಪ್ರತಿಭಟನೆಯಲ್ಲಿ ಸಂಘದ ಅಧ್ಯಕ್ಷ ಡಾ.ಸಿ.ರಾಮಸ್ವಾಮಿ ಸೇರಿದಂತೆ ನೂರಕ್ಕೂ ಅಧಿಕ ದಲಿತ ನೌಕರರು ಪಾಲ್ಗೊಂಡಿದ್ದರು. (ಕೆ.ಎಸ್-ಎಸ್.ಎಚ್)

Leave a Reply

comments

Related Articles

error: