ಕರ್ನಾಟಕಪ್ರಮುಖ ಸುದ್ದಿ

ಸಿಡಿ ಪ್ರಕರಣ: ಯುವತಿ ನನ್ನ ಭೇಟಿಗೆ ಪ್ರಯತ್ನಿಸಿರಬಹುದು, ಆದರೆ ಭೇಟಿಯಾಗಿಲ್ಲ: ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್

ಬೆಂಗಳೂರು,ಮಾ.27-ಸಿಡಿ ಪ್ರಕರಣದ ಯುವತಿ ನನ್ನನ್ನು ಭೇಟಿ ಮಾಡಲು ಪ್ರಯತ್ನಿಸಿರಬಹುದು. ಆದರೆ ಅವರು ನನ್ನನ್ನು ಭೇಟಿ ಮಾಡಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.

ನಿನ್ನೆ ಬಿಡುಗಡೆಯಾಗಿದ್ದ ಆಡಿಯೋದಲ್ಲಿ ಡಿ.ಕೆ.ಶಿವಕುಮಾರ್ ಅವರ ಹೆಸರು ಪ್ರಸ್ತಾಪವಾಗಿದೆ. ಈ ಬಗ್ಗೆ ಮಾಧ್ಯಮದವರು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಯುವತಿ ನನ್ನ ಭೇಟಿಗೆ ಯತ್ನಿಸಿರಬಹುದು. ಆದರೆ ನನ್ನನ್ನು ಭೇಟಿ ಮಾಡಿಲ್ಲ. ನೊಂದವರು ಪ್ರಾಮಾಣಿಕರಾಗಿದ್ದರೆ ನಾವು ಅವರಿಗೆ ಸಹಾಯ ಮಾಡುತ್ತೇವೆ. ಸಹಾಯ ಕೇಳಿಕೊಂಡು ನನ್ನ ಕಚೇರಿಗೆ ನಿತ್ಯ ನೂರಾರು ಜನ ಬರುತ್ತಾರೆ ಎಂದು ಹೇಳಿದ್ದಾರೆ.

ಇದೇ ವೇಳೆ ಸಿಡಿ ಪ್ರಕರಣದ ಮತ್ತೊಬ್ಬ ಆರೋಪಿ, ಮಾಜಿ ಪತ್ರಕರ್ತ ನರೇಶ್ ಬಗ್ಗೆ ಪ್ರತಿಕ್ರಿಯಿಸಿದ ಡಿಕೆಶಿ, ನರೇಶ್ ನನಗೆ ಬೇಕಾದ ಹುಡುಗ. ನಾನು ಆತನನ್ನು ಭೇಟಿ ಮಾಡಿದ್ದೇನೆ, ಕೆಲವು ವಿಚಾರಗಳನ್ನು ಆತನಿಂದ ತಿಳಿದುಕೊಂಡಿದ್ದೇನೆ ಎಂದಿದ್ದಾರೆ.

ಇನ್ನು ರಮೇಶ್ ಜಾರಕಿಹೊಳಿಗೆ ನನ್ನ ಬಗ್ಗೆ ಅನುಕಂಪ ಇದ್ದರೆ ಸಂತೋಷ ಎಂದು ಹೇಳಿದ್ದಾರೆ. (ಎಂ.ಎನ್)

 

Leave a Reply

comments

Related Articles

error: