ಮೈಸೂರು

ಇಂದು ಬದುಕಿನ ಸಾರ್ಥಕತೆ ಕುರಿತು ಉಪನ್ಯಾಸ

ಮೈಸೂರು,ಮಾ.29:-  ಜೆಎಸ್‍ಎಸ್ ಮಹಾವಿದ್ಯಾಪೀಠ ಮತ್ತು ಶ್ರೀ ಶಿವರಾತ್ರೀಶ್ವರ ಧಾರ್ಮಿಕ ದತ್ತಿಯ ಆಶ್ರಯದಲ್ಲಿ ಪ್ರತಿ ಸೋಮವಾರ ಆನ್‍ ಲೈನ್ (ವರ್ಚುವಲ್) ಮೂಲಕ ಜ್ಞಾನ ವಾರಿಧಿ ಸಾಪ್ತಾಹಿಕ ಉಪನ್ಯಾಸ ಮಾಲೆಯನ್ನು ನಡೆಸಿಕೊಂಡು ಬರಲಾಗುತ್ತಿದೆ.

ಜ್ಞಾನ ವಾರಿಧಿ-16 ಡಿಜಿಟಲ್ ಉಪನ್ಯಾಸ ಕಾರ್ಯಕ್ರಮವು ಇಂದು ಸಂಜೆ 6  ಗಂಟೆಗೆ   ಶಿವರಾತ್ರಿ ದೇಶಿಕೇಂದ್ರ ಮಹಾಸ್ವಾಮಿಗಳವರ ದಿವ್ಯಸಾನ್ನಿಧ್ಯದಲ್ಲಿ ಜರುಗಲಿದೆ. ಕನಕಗಿರಿಯ ಶ್ರೀ ಸುವರ್ಣಗಿರಿ ಸಂಸ್ಥಾನ ವಿರಕ್ತಮಠದ ಡಾ.   ಚೆನ್ನಮಲ್ಲ ಸ್ವಾಮಿಗಳವರು ‘ಬದುಕಿನ ಸಾರ್ಥಕತೆ’ ವಿಷಯದ ಕುರಿತು ಆನ್‍ ಲೈನ್‍ ನಲ್ಲಿ ಉಪನ್ಯಾಸ ನೀಡಲಿದ್ದಾರೆ.

ಪ್ರತಿ ಸೋಮವಾರವೂ ನಡೆಯುವ ಈ ಉಪನ್ಯಾಸದಲ್ಲಿ ಕಲೆ, ಸಾಹಿತ್ಯ, ಸಂಸ್ಕೃತಿ, ವಿಜ್ಞಾನ, ತಂತ್ರಜ್ಞಾನ, ಧರ್ಮ, ಅಧ್ಯಾತ್ಮ, ಯೋಗ, ಆರೋಗ್ಯ, ಜೀವನಶೈಲಿ ಮುಂತಾದ ವಿಷಯಗಳು ಮತ್ತು ಪ್ರಚಲಿತ ವಿದ್ಯಮಾನಗಳನ್ನು ಕುರಿತು ದೇಶ ಮತ್ತು ವಿದೇಶದ ವಿವಿಧ ಸಂಪನ್ಮೂಲ ವ್ಯಕ್ತಿಗಳಿಂದ ಉಪನ್ಯಾಸಗಳನ್ನು ಆಯೋಜಿಸಲಾಗಿದೆ. ಆನ್‍ಲೈನ್ ಮೂಲಕ ನಡೆಯುವ ಈ ಉಪನ್ಯಾಸ ಕಾರ್ಯಕ್ರಮವು ಸಾಕಷ್ಟು ಜನಪ್ರಿಯಗೊಂಡಿದೆ.

ಈ ಉಪನ್ಯಾಸವನ್ನು   ಲಿಂಕ್‍ Yotube http://Youtube.com/c/JSSMahavidyapeethaonline

https://www.facebook.com/JSSMVP, http://jssonline.org ಗಳ ಮೂಲಕ ಕೇಳಬಹುದಾಗಿದೆ.  (ಜಿ.ಕೆ,ಎಸ್.ಎಚ್)

Leave a Reply

comments

Related Articles

error: