ಕರ್ನಾಟಕಪ್ರಮುಖ ಸುದ್ದಿ

ಬೆಳಗಾವಿ ಉಪಚುನಾವಣೆ: ನಾಮಪತ್ರ ಸಲ್ಲಿಸಿದ ಸತೀಶ್ ಜಾರಕಿಹೊಳಿ; ಸಿದ್ದರಾಮಯ್ಯ, ಡಿಕೆಶಿ ಸಾಥ್

ಬೆಳಗಾವಿ,ಮಾ.29-ಬೆಳಗಾವಿ ಲೋಕಸಭಾ ಕ್ಷೇತ್ರದ ಉಪಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಇಂದು ನಾಮಪತ್ರ ಸಲ್ಲಿಸಿದರು.

ನಗರದ ಆರ್.ಟಿ.ಒ ವೃತ್ತದಲ್ಲಿರುವ ಕಾಂಗ್ರೆಸ್ ಭವನದಿಂದ ಮೂರು ವಾಹನಗಳಲ್ಲಿ ಜಿಲ್ಲಾಧಿಕಾರಿ ಕಚೇರಿಗೆ ಆಗಮಿಸಿದ ಸತೀಶ್ ಜಾರಕಿಹೊಳಿ ಅವರು ದ್ವೀ ಪ್ರತಿಯಲ್ಲಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾ ಅಧಿಕಾರಿ ಡಾ.ಕೆ.ಹರೀಶಕುಮಾರ್ ಅವರಿಗೆ ನಾಮಪತ್ರ ಸಲ್ಲಿಸಿದರು. ಈ ವೇಳೆ ಸತೀಶ ಜಾರಕಿಹೊಳಿ ಅವರು ಹಸಿರು ಶಾಲು ಧರಿಸಿದ್ದರು.

ಸತೀಶ್ ಜಾರಕಿಹೊಳಿಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಸಾಥ್ ನೀಡಿದರು. (ಎಂ.ಎನ್)

Leave a Reply

comments

Related Articles

error: