ಕರ್ನಾಟಕಪ್ರಮುಖ ಸುದ್ದಿ

ಸಿಡಿ ಪ್ರಕರಣ ಉಪಚುನಾವಣೆ ಮೇಲೆ ಪರಿಣಾಮ ಬೀರುವುದಿಲ್ಲ: ಸಚಿವ ಶ್ರೀರಾಮುಲು

ಮಸ್ಕಿ,(ರಾಯಚೂರು),ಮಾ.29- ರಾಯಚೂರು ಜಿಲ್ಲೆಯ ಮಸ್ಕಿ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಗೆ ಬಿಜೆಪಿ ಅಭ್ಯರ್ಥಿ ಪ್ರತಾಪ್ ಗೌಡ ಪಾಟೀಲ್ ಇಂದು ನಾಮಪತ್ರ ಸಲ್ಲಿಸಿದರು.

ಈ ವೇಳೆ ಸಮಾಜ ಕಲ್ಯಾಣ ಸಚಿವರಾದ ಬಿ. ಶ್ರೀರಾಮುಲು ಉಪಸ್ಥಿತರಿದ್ದರು. ಪ್ರತಾಪ್ ಗೌಡ ಪಾಟೀಲ್ ಅವರು ನಾಮಪತ್ರ ಸಲ್ಲಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಶ್ರೀರಾಮುಲು ಅವರು ಸಿಡಿ ಪ್ರಕರಣದಿಂದ ಉಪ ಚುನಾವಣೆ ಮೇಲೆ ಯಾವುದೇ ಪರಿಣಾಮ ಆಗುವುದಿಲ್ಲ ಎಂದಿದ್ದಾರೆ.

ಸಿಡಿಗೆ ಸಂಬಂಧಿಸಿದ ವಿಚಾರ ತನಿಖಾ ಹಂತದಲ್ಲಿ ಇರುವುದರಿಂದ ಈ ಪ್ರಕರಣದಿಂದ ಉಪ ಚುನಾವಣೆ ಮೇಲೆ ಯಾವುದೇ ಪರಿಣಾಮ ಆಗುವುದಿಲ್ಲ. ಕ್ಷೇತ್ರಗಳ ಅಭಿವೃದ್ಧಿ ವಿಚಾರವನ್ನು ಮುಂದಿಟ್ಟುಕೊಂಡು ಜನರಿಂದ ಮತ ಕೇಳುತ್ತಿದ್ದೇವೆ. ನಮ್ಮ ಅಭ್ಯರ್ಥಿಗಳು ಗೆಲ್ಲುವುದು ನಿಶ್ಚಿತ ಎಂದು ಹೇಳಿದರು.

ಬಿಜೆಪಿ ಸಂಸದರು ಗುಲಾಮರಂತೆ ಎಂದು ಸಿದ್ದರಾಮಯ್ಯ ಅವರು ನೀಡಿರುವ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ಕಾಂಗ್ರೆಸ್ ನಾಯಕರು ಉಪಚುನಾವಣೆಯಲ್ಲಿ ಸೋಲಿನ ಭೀತಿಯಿಂದ ಈ ರೀತಿ ಮಾತನಾಡುತ್ತಿದ್ದಾರೆ. ಸಿದ್ದರಾಮಯ್ಯ ಅವರು ಹಿರಿಯರಾಗಿದ್ದರು ಈ ರೀತಿ ಮಾತನಾಡಬಾರದು ಎಂದು ಹೇಳಿದರು. (ಎಂ.ಎನ್)

 

Leave a Reply

comments

Related Articles

error: