ಕ್ರೀಡೆಮೈಸೂರು

ವಿಜಯ ವಿಠಲ ಪದವಿಪೂರ್ವ ಕಾಲೇಜಿನ ಅನಘ.ಎಂ.ಎ.ಗೆ “ವೈಯುಕ್ತಿಕ ಚಾಂಪಿಯನ್‍ ಶಿಪ್”

ಮೈಸೂರು,ಮಾ.30:- ಪದವಿಪೂರ್ವ ಶಿಕ್ಷಣ ಇಲಾಖೆ, ಮೈಸೂರು ಜಿಲ್ಲೆ, ಮೈಸೂರು ಇವರು ಇತ್ತೀಚೆಗೆ ಮೈಸೂರು ವಿಶ್ವವಿದ್ಯಾನಿಲಯದ ಓವೆಲ್ ಕ್ರೀಡಾಂಗಣದಲ್ಲಿ ಆಯೋಜಿಸಿದ್ದ ಮೈಸೂರು ಜಿಲ್ಲಾ ಮಟ್ಟದ ಅಥ್ಲೆಟಿಕ್ ಕ್ರೀಡಾಕೂಟದಲ್ಲಿ ಮೈಸೂರು ನಗರದ ವಿಜಯ ವಿಠ್ಠಲ ಪದವಿಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ಅನಘ.ಎಂ.ಎ  ಭಾಗವಹಿಸಿ ಬಾಲಕಿಯರ ವಿಭಾಗದಲ್ಲಿ “ವೈಯುಕ್ತಿಕ ಚಾಂಪಿಯನ್‍ ಶಿಪ್” ಪ್ರಶಸ್ತಿಯನ್ನು ಪಡೆದುಕೊಂಡಿದ್ದಾರೆ.

ಇವರು ಎತ್ತರ ಜಿಗಿತ ಮತ್ತು ಟ್ರಿಪಲ್ ಜಂಪ್ ಸ್ಪರ್ಧೆಯಲ್ಲಿ ಪ್ರಥಮ ಬಹುಮಾನ ಗಳಿಸಿದ್ದಾರೆ. ಸಾಧನೆಗೈದ ವಿದ್ಯಾರ್ಥಿನಿಯನ್ನು ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಮತ್ತು ಬೋಧಕ ವೃಂದದವರು ಅಭಿನಂದಿಸಿದ್ದಾರೆ. (ಜಿ.ಕೆ,ಎಸ್.ಎಚ್)

Leave a Reply

comments

Related Articles

error: