
ಕ್ರೀಡೆದೇಶಪ್ರಮುಖ ಸುದ್ದಿ
ಐಸಿಸಿ ಟಿ20 ರ್ಯಾಂಕಿಂಗ್ ನಲ್ಲಿ ಅಗ್ರಸ್ಥಾನ ಭದ್ರಪಡಿಸಿಕೊಂಡ ಶೆಫಾಲಿ ವರ್ಮಾ
ವಿದೇಶ( ದುಬೈ)ಮಾ.31:- ಅಂತರರಾಷ್ಟ್ರೀಯ ಕ್ರಿಕೆಟ್ ಕೌನ್ಸಿಲ್ (ಐಸಿಸಿ) ಟಿ20 ರ್ಯಾಂಕಿಂಗ್ ನಲ್ಲಿ ಭಾರತ ಮಹಿಳಾ ಕ್ರಿಕೆಟ್ ತಂಡದ ಆರಂಭಿಕ ಆಟಗಾರ್ತಿ ಶೆಫಾಲಿ ವರ್ಮಾ ಅಗ್ರಸ್ಥಾನ ಭದ್ರಪಡಿಸಿಕೊಂಡಿದ್ದಾರೆ.
ದಕ್ಷಿಣ ಆಫ್ರಿಕಾ ಎದುರಿನ ಸರಣಿಯ ಕೊನೆಯ ಟಿ20 ಪಂದ್ಯದಲ್ಲಿ ಅವರು 30 ಎಸೆತಗಳಲ್ಲಿ 60 ರನ್ಗಳನ್ನು ಗಳಿಸಿದ್ದರು. ಅವರ ಖಾತೆಯಲ್ಲಿ ಒಟ್ಟು 776 ರೇಟಿಂಗ್ ಪಾಯಿಂಟ್ಸ್ ಇವೆ. ಆಸ್ಟ್ರೇಲಿಯಾದ ಬೆತ್ ಮೂನಿ ಅವರಿಗಿಂತ 35 ಪಾಯಿಂಟ್ಸ್ ಮುನ್ನಡೆಯಲ್ಲಿದ್ದಾರೆ. ಸ್ಮೃತಿ ಮಂದಾನ ಅವರೂ ಏಳರಿಂದ ಆರನೇ ಸ್ಥಾನಕ್ಕೇರಿದ್ದಾರೆ.
ಬೌಲಿಂಗ್ ವಿಭಾಗದಲ್ಲಿ ಎಡಗೈ ಸ್ಪಿನ್ನರ್, ವಿಜಯಪುರದ ರಾಜೇಶ್ವರಿ ಗಾಯಕವಾಡ್ 13ನೇ ಸ್ಥಾನಕ್ಕೇರಿದ್ದಾರೆ. ಇದು ಅವರು ವೃತ್ತಿಜೀವನದ ಶ್ರೇಷ್ಠ ಸಾಧನೆಯಾಗಿದೆ. (ಏಜೆನ್ಸೀಸ್,ಎಸ್.ಎಚ್)