ದೇಶಪ್ರಮುಖ ಸುದ್ದಿ

ಮಹಾರಾಷ್ಟ್ರದಲ್ಲಿ ಕಳೆದ 24 ಗಂಟೆಯಲ್ಲಿ ದಾಖಲೆಯ 39,544 ಸೋಂಕು ಪತ್ತೆ

ದೇಶ(ಮುಂಬೈ)ಏ.1:- ದೇಶದಲ್ಲಿ ಅತೀ ಹೆಚ್ಚು ಕೊರೊನಾ ಪ್ರಕರಣಗಳು ದಾಖಲಾಗುತ್ತಿರುವ ಮಹಾರಾಷ್ಟ್ರದಲ್ಲಿ ಕಳೆದ 24 ಗಂಟೆಯಲ್ಲಿ ದಾಖಲೆಯ 39,544 ಸೋಂಕು ಪ್ರಕರಣಗಳು ಪತ್ತೆಯಾಗಿದ್ದು 227 ಮಂದಿ ಸಾವನ್ನಪ್ಪಿದ್ದಾರೆ.

ರಾಜ್ಯ ಸರಕಾರ ಬುಧವಾರ ಬಿಡುಗಡೆ ಮಾಡಿದ ಮಾಹಿತಿ ಪ್ರಕಾರ ರಾಜ್ಯದಲ್ಲಿ ಶೇ.1.94ಕ್ಕೆ ಸಾವಿನ ಸಂಖ್ಯೆ ಹೆಚ್ಚಾಗಿದೆ. ಇದರಿಂದ ಒಟ್ಟಾರೆ ಸೋಂಕಿತರ ಸಂಖ್ಯೆ 28,12,980ಕ್ಕೆ ಏರಿಕೆಯಾದರೆ, ಸಾವಿನ ಸಂಖ್ಯೆ 54,649ಕ್ಕೆ ಏರಿಕೆಯಾಗಿದೆ.

ಒಟ್ಟಾರೆ ಗುಣಮುಖರಾದವರ ಸಂಖ್ಯೆ 24,00,727ಕ್ಕೆ ತಲುಪಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ 3,56,243ಕ್ಕೆ ಏರಿದೆ. (ಏಜೆನ್ಸೀಸ್,ಎಸ್.ಎಚ್)

Leave a Reply

comments

Related Articles

error: