ಮೈಸೂರು

83ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಜೂನ್ ನಲ್ಲಿ ನಡೆಸಲು ತೀರ್ಮಾನ

83ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಮೈಸೂರಿನಲ್ಲಿ ಆಯೋಜಿಸುವ ಕುರಿತು ಶುಕ್ರವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸಭೆಯನ್ನು ಆಯೋಜಿಸಲಾಗಿತ್ತು.

ಮೈಸೂರು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಡಿ.ರಂದೀಪ್ ಅಧ್ಯಕ್ಷತೆ ವಹಿಸಿದ್ದರು. ಸಭೆಯಲ್ಲಿ ಸಮ್ಮೇಳನವನ್ನು ನಡೆಸಲು ತಾತ್ಕಾಲಿಕವಾಗಿ ಜೂನ್ ಕೊನೆಯಲ್ಲಿ ಅಥವಾ ಜುಲೈ ಮೊದಲವಾರದಲ್ಲಿ ದಿನಾಂಕವನ್ನು ಗೊತ್ತುಪಡಿಸಲಾಯಿತು. ಜಿಲ್ಲೆಯ ಜನಪ್ರತಿನಿಧಿಗಳನ್ನೊಳಗೊಂಡ ಸ್ವಾಗತ ಸಮಿತಿ ರಚಿಸಲು ತೀರ್ಮಾನ ಕೈಗೊಳ್ಳಲಾಯಿತು. ಮುಖ್ಯಮಂತ್ರಿಗಳು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರ ಗಮನಕ್ಕೆ ತಂದು ಮುಖ್ಯವೇದಿಕೆಯ ಸ್ಥಳ ಆಯ್ಕೆ ಮಾಡಲು ತೀರ್ಮಾನಿಸಲಾಯಿತು. ಮುಂದಿನ ಸಭೆಯನ್ನು ಜಿಲ್ಲಾ ಉಸ್ತುವಾರಿ ಸಚಿವ ಡಾ.ಹೆಚ್.ಸಿ.ಮಹದೇವಪ್ಪ ಅಧ್ಯಕ್ಷತೆಯಲ್ಲಿ ಏಪ್ರಿಲ್ 27ರಂದು ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆಸಲು ಹಾಗೂ ಸಭೆಗೆ ಜನಪ್ರತಿನಿಧಿಗಳು, ಕನ್ನಡ ಪರ ಸಂಘ ಸಂಸ್ಥೆಗಳು, ಕಲಾವಿದರು, ಸಾಹಿತಿಗಳನ್ನು ಕರೆಸಲು ತೀರ್ಮಾನ ಕೈಗೊಳ್ಳಲಾಯಿತು.

ಸಭೆಯಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಮಾಜಿ ಅಧ್ಯಕ್ಷ ಚಂದ್ರು, ಹಾಲಿ ಅಧ್ಯಕ್ಷ ವೈ.ಡಿ.ರಾಜಣ್ಣ ಮತ್ತಿತರರು ಉಪಸ್ಥಿತರಿದ್ದರು. (ಕೆ.ಎಸ್-ಎಸ್.ಎಚ್)

Leave a Reply

comments

Related Articles

error: