Uncategorized

ಅನರ್ಹ ಬಿ.ಪಿ.ಎಲ್ ಪಡಿತರ ಚೀಟಿಯನ್ನು ಹಿಂದಿರುಗಿಸಿ

ಮೈಸೂರು,ಏ . 1 :- ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆಯ ವತಿಯಿಂದ ನೀಡಲಾಗಿರುವ ಅನರ್ಹ ಬಿ.ಪಿ.ಎಲ್. ಪಡಿತರ ಚೀಟಿಯನ್ನು ಹಿಂದಿರುಗಿಸುವಂತೆ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಜಂಟಿ ನಿರ್ದೇಶಕರಾದ ಪಿ. ಶಿವಣ್ಣ ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.
ಸದೃಢ ಕುಟುಂಬಗಳು ವೇತನವನ್ನು ಗಣನೆಗೆ ತೆಗೆದುಕೊಳ್ಳದೆ ಎಲ್ಲಾ ಖಾಯಂ ನೌಕರರು ಸರ್ಕಾರದ ಅಥವಾ ಸರ್ಕಾರದಿಂದ ಅನುದಾನವನ್ನು ಪಡೆಯುತ್ತಿರುವ ಸಂಸ್ಥೆಗಳು ಅಥವಾ ಸರ್ಕಾರಿ ಪ್ರಾಯೋಜಿತ ಸರ್ಕಾರಿ ಸ್ವಾಮ್ಯದ ಸಂಸ್ಥೆಗಳು, ಮಂಡಳಿಗಳು, ನಿಗಮಗಳು, ಸ್ವಾಯತ್ತ ಸಂಸ್ಥೆಗಳು ಇತ್ಯಾದಿ,ಒಳಗೊಂಡಂತೆ ಆದಾಯ ತೆರಿಗೆ, ಸೇವಾ ತೆರಿಗೆ, ವ್ಯಾಟ್, ವೃತ್ತಿ ತೆರಿಗೆ, ಪಾವತಿಸುವ ಎಲ್ಲಾ ಕುಟುಂಬಗಳು.
ಗ್ರಾಮೀಣಾ ಪ್ರದೇಶದಲ್ಲಿ 3 ಹೆಕ್ಟೇರ್ ಒಣ ಭೂಮಿ ಅಥವಾ ತತ್ಸಮಾನ ನೀರಾವರಿ ಭೂಮಿ ಹೊಂದಿರುವ ಕುಟುಂಬಗಳು ಅಥವಾ ಗ್ರಾಮೀಣ ಪ್ರದೇಶವನ್ನು ಹೊರತು ಪಡಿಸಿ ನಗರ ಪ್ರದೇಶದಲ್ಲಿ 1000 ಚದುರ ಅಡಿಗಿಂತಲೂ ಹೆಚ್ಚಿನ ವಿಸ್ತೀರ್ಣದ ಪಕ್ಕಾ ಮನೆಯನ್ನು ಸ್ವಂತವಾಗಿ ಹೊಂದಿರುವ ಕುಟುಂಬಗಳು.
ಜೀವನೋಪಾಯಕ್ಕಾಗಿ ಸ್ವಂತ ಓಡಿಸುವ ಒಂದು ವಾಣಿಜ್ಯ ವಾಹನವನ್ನು ಅಂದರೆ ಟ್ರಾಕ್ಟರ್,ಮ್ಯಾಕ್ಸಿಕ್ಯಾಬ್, ಟ್ಯಾಕ್ಸಿ ಇತ್ಯಾದಿಗಳನ್ನು ಹೊಂದಿದ ಕುಟುಂಬವನ್ನು ಹೊರತು ಪಡಿಸಿ ನಾಲ್ಕು ಚಕ್ರದ ವಾಹನವನ್ನು ಹೊಂದಿರುವ ಎಲ್ಲಾ ಕುಟುಂಬಗಳು ಹಾಗೂ ಕುಟುಂಬದ ವಾರ್ಷಿಕ ಆದಾಯ ರೂ1.20 ಲಕ್ಷಗಳಿಗಿಂತಲೂ ಹೆಚ್ಚು ಇರುವ ಕುಟುಂಬಗಳು ಬಿ.ಪಿ.ಎಲ್ ಕಾರ್ಡ್‍ಗಳನ್ನು ಹಿಂದಿರುಗಿಸಬೇಕು.
ಈ ಹಿನ್ನೆಲೆಯಲ್ಲಿ ಆರ್ಥಿಕವಾಗಿ ಸದೃಡವಾಗಿರುವವರು ಮತ್ತು ಇತರೆ ಅನರ್ಹರು ಹೊಂದಿರುವ ಅಂತ್ಯೋದಯ ಅನ್ನ, ಆದ್ಯತಾ ಪಡಿತರ ಚೀಟಿಗಳನ್ನು ಹಿಂದಿರುಗಿಸಲು ಈಗಾಗಲೇ ಹಲವು ಬಾರಿ ಮನವಿ ಮಾಡಲಾಗಿದ್ದು, ಈ ಮನವಿಗೆ ಕೆಲವರು ಸ್ಪಂಧಿಸಿ ಬಿ.ಪಿ.ಎಲ್ ಪಡಿತರ ಚೀಟಿಗಳನ್ನುಹಿಂದಿರುಗಿಸಿ ಎ.ಪಿ.ಎಲ್. ಪಡಿತರ ಚೀಟಿಗಳನ್ನು ಪಡೆದಿರುತ್ತಾರೆ.
ಆದ್ದರಿಂದ ತಮ್ಮ ತಾಲ್ಲೂಕಿನ ತಹಶೀಲ್ದಾರರಿಗೆ (ಆಹಾರ ಶಾಖೆಯಲ್ಲಿ) ಹಾಗೂ ಮೈಸೂರು ನಗರದವರಾದ್ದಲ್ಲಿ ಸಹಾಯಕ ನಿರ್ದೇಶಕರ ಕಛೇರಿ, ಸಿದ್ದಾರ್ಥ ನಗರದಲ್ಲಿರುವ ನೂತನ ಜಿಲ್ಲಾಧಿಕಾರಿಗಳ ಕಚೇರಿಗೆ   31-12-2019 ರೊಳಗೆ ತಮ್ಮ ಬಿ.ಪಿ.ಎಲ್ ಪಡಿತರ ಚೀಟಿಯನ್ನು ಒಪ್ಪಿಸಿ ಎ.ಪಿ.ಎಲ್. ಪಡಿತರ ಚೀಟಿಯನ್ನು ಪಡೆಯುವುದು. ತಪ್ಪಿದ್ದಲ್ಲಿ ಅನರ್ಹರು ಅಕ್ರಮ ಪಡಿತರ ಚೀಟಿ ಹೊಂದಿರುವವರ ವಿರುದ್ದ ಕರ್ನಾಟಕ ಅನಧಿಕೃತ ಪಡಿತರ ಚೀಟಿ ಹೊಂದುವುದರ ತಡೆಆದೇಶ 1977 ಕಾಯ್ದೆ ಪ್ರಕಾರ ಕ್ರಮ ಜರುಗಿಸಲಾಗುವುದೆಂದು ಜಿಲ್ಲಾ ಆಹಾರ, ನಾಗರಿಕ ಸರಬರಾಜು ಹಾಗೂ ಗ್ರಾಹಕ ವ್ಯವಹಾರಗಳ ಇಲಾಖೆಯ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. (ಜಿ.ಕೆ,ಎಸ್.ಎಚ್)

Leave a Reply

comments

Related Articles

error: