ದೇಶಪ್ರಮುಖ ಸುದ್ದಿ

ದೆಹಲಿಯಲ್ಲಿ 2700 ಕ್ಕೂ ಹೆಚ್ಚು ಹೊಸ ಕೊರೋನಾ ಪ್ರಕರಣ : ಸಭೆ ಕರೆದ ಸಿಎಂ ಕೇಜ್ರಿವಾಲ್

ದೇಶ(ನವದೆಹಲಿ)ಏ.2:- ರಾಷ್ಟ್ರ ರಾಜಧಾನಿ ದೆಹಲಿಯು ಮತ್ತೊಮ್ಮೆ ಕೊರೋನಾ ಸೋಂಕಿನ ಸಂಖ್ಯೆಯಲ್ಲಿ ಹೆಚ್ಚಳ ಕಂಡಿದೆ. ಆರೋಗ್ಯ ಸಚಿವಾಲಯವು ಸಂಜೆ 7.30 ರ ಸುಮಾರಿಗೆ ಬಿಡುಗಡೆ ಮಾಡಿದ ಮಾಹಿತಿಯ ಪ್ರಕಾರ, ಕಳೆದ 24 ಗಂಟೆಗಳಲ್ಲಿ 2790 ಜನರು ಕೊರೋನಾ ಸೋಂಕಿಗೆ ಒಳಗಾಗಿದ್ದಾರೆ ಮತ್ತು 9 ರೋಗಿಗಳು ಸಾವನ್ನಪ್ಪಿದ್ದಾರೆ.
ಇದಕ್ಕೂ ಮುನ್ನ ಬುಧವಾರ 1,819 ಜನರು ಕೊರೋನಾ ಸೋಂಕಿಗೆ ಒಳಗಾಗಿದ್ದರು. 11 ಮಂದಿ ಸಾವನ್ನಪ್ಪಿದ್ದರು. ದೆಹಲಿಯಲ್ಲಿ ಇದುವರೆಗೆ 66,5220 ಜನರು ಕೊರೋನಾ ಸೋಂಕಿಗೆ ಒಳಗಾಗಿದ್ದಾರೆ. ಇದುವರೆಗೆ 6,43,686 ಜನರಲ್ಲಿ ಗುಣಮುಖರಾಗಿದ್ದಾರೆ. ಇಲ್ಲಿಯವರೆಗೆ 11,036 ಮಂದಿ ಸಾವನ್ನಪ್ಪಿದ್ದಾರೆ.
ಹೆಚ್ಚುತ್ತಿರುವ ಕೊರೋನದ ಪ್ರಕರಣಗಳ ದೃಷ್ಟಿಯಿಂದ, ದೆಹಲಿ ಸರ್ಕಾರವು ಎಂಟನೇ ತರಗತಿಯವರೆಗೆ ಶಾಲೆಯನ್ನು ಮುಚ್ಚಲು ನಿರ್ಧರಿಸಿದೆ.
ಕೊರೋನದ ದೃಷ್ಟಿಯಿಂದ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಶುಕ್ರವಾರ ಸಭೆ ಕರೆದಿದ್ದಾರೆ. ದೆಹಲಿ ಆರೋಗ್ಯ ಸಚಿವ ಸತ್ಯೇಂದ್ರ ಜೈನ್, ಆರೋಗ್ಯ ಇಲಾಖೆ ಅಧಿಕಾರಿಗಳು ಮತ್ತು ಇತರ ಸಂಬಂಧಿತ ಇಲಾಖೆಗಳ ಅಧಿಕಾರಿಗಳು ಕೂಡ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ. (ಏಜೆನ್ಸೀಸ್,ಎಸ್.ಎಚ್)

Leave a Reply

comments

Related Articles

error: