ದೇಶಪ್ರಮುಖ ಸುದ್ದಿಮನರಂಜನೆ

ಮನೆಯಲ್ಲಿಯೇ ಕ್ವಾರೆಂಟೈನ್ ನಲ್ಲಿದ್ದ ಬಾಲಿವುಡ್ ನಟ ಅಕ್ಷಯ್ ಕುಮಾರ್ ಆಸ್ಪತ್ರೆಗೆ ದಾಖಲು

ದೇಶ(ಮುಂಬೈ)ಏ.5:- ಬಾಲಿವುಡ್ ನಟ ಅಕ್ಷಯ್ ಕುಮಾರ್ ಅವರಲ್ಲಿ ಕೊರೋನಾ ಸೋಂಕು ದೃಢಪಟ್ಟಿದ್ದು, ಅವರು ಮನೆಯಲ್ಲಿಯೇ ಕ್ವಾರೆಂಟೈನ್ ನಲ್ಲಿದ್ದು, ಚಿಕಿತ್ಸೆ ಪಡೆಯುತ್ತಿದ್ದರು.   ಆದರೆ ಅವರ ಆರೋಗ್ಯ ಹದಗೆಡುತ್ತಿದ್ದು, ಅವರನ್ನು ಇಂದು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಅಕ್ಷಯ್ ಕುಮಾರ್ ಅವರು ಆಸ್ಪತ್ರೆಯಲ್ಲಿ ದಾಖಲಾಗಿರುವ ಬಗ್ಗೆ ಸಾಮಾಜಿಕ ಮಾಧ್ಯಮಗಳ ಮೂಲಕ ಮಾಹಿತಿ ನೀಡಿದ್ದಾರೆ. ಅಕ್ಷಯ್ ಕುಮಾರ್ ಟ್ವಿಟ್ಟರ್ ನಲ್ಲಿ “ನಿಮ್ಮ ಪ್ರಾರ್ಥನೆಗಳು ಪ್ರಭಾವ ಬೀರುತ್ತಿದೆ.  ನಾನು ಚೆನ್ನಾಗಿದ್ದೇನೆ ಆದರೆ ಮುನ್ನೆಚ್ಚರಿಕೆ ಕ್ರಮವಾಗಿ ಆಸ್ಪತ್ರೆಗೆ ದಾಖಲಿಸುವಂತೆ ಸೂಚಿಸಲಾಗಿದ್ದು, ಆಸ್ಪತ್ರೆಗೆ ದಾಖಲಾಗಿದ್ದೇನೆ. ಶೀಘ್ರದಲ್ಲೇ ಹಿಂತಿರುಗುತ್ತೇನೆ. ನೀವು ನಿಮ್ಮ ಬಗ್ಗೆ ಕಾಳಜಿ ವಹಿಸಿ ಎಂದು ಕೋರಿದ್ದಾರೆ. (ಏಜೆನ್ಸೀಸ್,ಎಸ್.ಎಚ್)

Leave a Reply

comments

Related Articles

error: