ಕರ್ನಾಟಕಪ್ರಮುಖ ಸುದ್ದಿ

ರಾಜ್ಯದಲ್ಲಿ ಹೂಡಿಕೆಯ ಅವಕಾಶಗಳ ಬಗ್ಗೆ ವರ್ಚುಯಲ್ ಸಭೆ

ರಾಜ್ಯ(ಬೆಂಗಳೂರು)ಏ.6:- ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಅಮೆರಿಕಾದ ಟ್ರೈಟನ್ ಎಲೆಕ್ಟ್ರಿಕ್ ಸಂಸ್ಥೆಯ ಮುಖ್ಯಕಾರ್ಯನಿರ್ವಹಣಾಧಿಕಾರಿ, ಹಿಮಾಂಶು ಪಟೇಲ್ ಅವರೊಂದಿಗೆ ರಾಜ್ಯದಲ್ಲಿ ಹೂಡಿಕೆಯ ಅವಕಾಶಗಳ ಬಗ್ಗೆ ವರ್ಚುಯಲ್ ಸಭೆ ನಡೆಸಿದರು.

ಟ್ರೈಟನ್ ಎಲೆಕ್ಟ್ರಿಕ್ ವಾಹನಗಳ ಸಂಸ್ಥೆಯು ರಾಜ್ಯದಲ್ಲಿ ಹೂಡಿಕೆ ಮಾಡಲು ಅಗತ್ಯವಿರುವ ಎಲ್ಲಾ ಸಹಕಾರ ಮತ್ತು ಬೆಂಬಲವನ್ನು ನೀಡುವುದಾಗಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಭರವಸೆ ನೀಡಿದರು. ರಾಮನಗರದಲ್ಲಿ ಎಲೆಕ್ಟ್ರಿಕ್ ವಾಹನಗಳ ಕ್ಲಸ್ಟರ್‍ ಅನ್ನು 500 ಕ್ಕೂ ಹೆಚ್ಚು ಎಕರೆ ಪ್ರದೇಶದಲ್ಲಿ ನಿರ್ಮಿಸಲಾಗುತ್ತಿದ್ದು, ಎಲೆಕ್ಟ್ರಿಕ್ ವಾಹನಗಳ ಉತ್ಪಾದನೆಗೆ ಕ್ಲಸ್ಟರ್ ಸೂಕ್ತ ವಾತಾವರಣವನ್ನು ಕಲ್ಪಿಸಲಿದೆ.

ದೇಶದಲ್ಲಿ ಮೊತ್ತಮೊದಲ ಎಲೆಕ್ಟ್ರಿಕ್ ವಾಹನಗಳ ನೀತಿಯನ್ನು ಜಾರಿಗೆ ತಂದ ರಾಜ್ಯ ಕರ್ನಾಟಕ. ಪ್ರಸ್ತುತ ನೀತಿಯನ್ನು ಹೆಚ್ಚು ಹೂಡಿಕೆಸ್ನೇಹಿಯನ್ನಾಗಿಸಲು ಪರಿಷ್ಕರಿಸಲಾಗುತ್ತಿದೆ ಎಂದರು. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: