ಕರ್ನಾಟಕಪ್ರಮುಖ ಸುದ್ದಿಮನರಂಜನೆ

ಕೊರೊನಾ ಲಸಿಕೆ ಪಡೆದುಕೊಂಡ ನಟ ಪುನೀತ್ ರಾಜ್ ಕುಮಾರ್

ಬೆಂಗಳೂರು,ಏ.7- ಪವರ್‌ಸ್ಟಾರ್ ಪುನೀತ್ ರಾಜ್ ಕುಮಾರ್ ಅವರು ಇಂದು ಕೊರೊನಾ ಲಸಿಕೆ ಹಾಕಿಸಿಕೊಂಡಿದ್ದಾರೆ. ಈ ಬಗ್ಗೆ ಸ್ವತಃ ಅವರೇ ಟ್ವೀಟ್ ಮೂಲಕ ತಿಳಿಸಿದ್ದಾರೆ.

ಲಸಿಕೆ ಪಡೆದುಕೊಳ್ಳುತ್ತಿರುವ ಫೋಟೋವನ್ನು ಪೋಸ್ಟ್ ಮಾಡಿ ‘ಇಂದು ಕೊರೊನಾ ಲಸಿಕೆಯ ಮೊದಲ ಡೋಸ್ ಅನ್ನು ಪಡೆದೆ. ನೀವು 45 ವರ್ಷದ ಮೇಲ್ಪಟ್ಟವರಾಗಿದ್ದರೆ ಲಸಿಕೆ ಹಾಕಿಸಿಕೊಳ್ಳಿ’ ಎಂದು ಟ್ವೀಟ್ ಮಾಡಿ ಸಾರ್ವಜನಿಕರಲ್ಲಿ ಅರಿವು ಮೂಡಿಸುವ ಪ್ರಯತ್ನ ಮಾಡಿದ್ದಾರೆ.

ಅಪ್ಪು ಈ ಫೋಟೋ ಹಂಚಿಕೊಳ್ಳುತ್ತಿದ್ದಂತೆ ಅಭಿಮಾನಿಗಳು ನಿಮಗೆ 45 ವರ್ಷ ಆಯಿತಾ ? ಎಂದು ಅಚ್ಚರಿಯ ಕಾಮೆಂಟ್ ಮಾಡುತ್ತಿದ್ದಾರೆ. ಇನ್ನು 25 ವರ್ಷದವರ ಹಾಗೆ ಕಾಣುತ್ತಿದ್ದೀರಾ ಎನ್ನುತ್ತಿದ್ದಾರೆ. ಸದ್ಯ ಪುನೀತ್ ರಾಜ್ ಕುಮಾರ್ ಅವರ ಯುವರತ್ನ ಸಿನಿಮಾ ಬಿಡುಗಡೆಗೊಂಡಿದ್ದು, ಭರ್ಜರಿ ಪ್ರದರ್ಶನ ಕಾಣುತ್ತಿದೆ. ಚಿತ್ರದ ಬಗ್ಗೆ ಮೆಚ್ಚುಗೆ ವ್ಯಕ್ತವಾಗುತ್ತಿದೆ.

ಇತ್ತೀಚಿಗಷ್ಟೆ ನಟ ಮತ್ತು ರಾಜಕಾರಣಿ ಜಗ್ಗೇಶ್ ಮತ್ತು ಅವರ ಪತ್ನಿ ಪರಿಮಳ ಜಗ್ಗೇಶ್ ಅವರು ಕೊರೊನಾ ಲಸಿಕೆ ಹಾಕಿಸಿಕೊಂಡಿದ್ದರು. ಈ ಮೊದಲು ನಟ ಅನಂತ್ ನಾಗ್ ಲಸಿಕೆ ಹಾಕಿಸಿಕೊಂಡಿದ್ದರು.

ರಾಜ್ಯದಲ್ಲಿ ಕೊರೊನಾ ಎರಡನೇ ಅಲೆ ಪ್ರಾರಂಭವಾಗಿದ್ದು, ದಿನೇ ದಿನೇ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ. ಹೀಗಾಗಿ ಸರ್ಕಾರ ಕೊರೊನಾ ಲಸಿಕೆ ಅಭಿಯಾನವನ್ನು ಚುರುಕುಗೊಳಿಸಿದ್ದು, 45 ವರ್ಷಕ್ಕಿಂತ ಮೇಲ್ಪಟ್ಟವರಿಗೆ ಲಸಿಕೆ ನೀಡಲಾಗುತ್ತಿದೆ. (ಎಂ.ಎನ್)

 

Leave a Reply

comments

Related Articles

error: