ಕರ್ನಾಟಕಪ್ರಮುಖ ಸುದ್ದಿಮನರಂಜನೆ

`ಮದಗಜ’ ಶೂಟಿಂಗ್ ವೇಳೆ ನಟ ಶ್ರೀಮುರಳಿಗೆ ಗಾಯ

ಬೆಂಗಳೂರು,ಏ.7- ‘ಮದಗಜ’ ಸಿನಿಮಾದ ಚಿತ್ರೀಕರಣದ ವೇಳೆ ರೋರಿಂಗ್ ಸ್ಟಾರ್ ಶ್ರೀಮುರಳಿ ಅವರ ಕಾಲಿಗೆ ಗಾಯವಾಗಿದೆ.

ನಿನ್ನೆ ಬೆಂಗಳೂರಿನ ಕಂಠೀರವ ಸ್ಟುಡಿಯೋದಲ್ಲಿ ಫೈಟ್ ಸೀನ್ ಶೂಟ್ ಮಾಡುವ ವೇಳೆ ಕಾಲಿಗೆ ಗಾಯವಾಗಿದ್ದು, ತಕ್ಷಣ ಅವರಿಗೆ ಚಿಕಿತ್ಸೆ ಕೊಡಿಸಲಾಗಿದೆ. 15 ದಿನಗಳ ವಿಶ್ರಾಂತಿ ಪಡೆಯುವಂತೆ ವೈದ್ಯರು ಸೂಚಿಸಿದ್ದಾರೆ ಎಂದು ತಿಳಿದುಬಂದಿದೆ.

ಮದಗಜ ಚಿತ್ರಕ್ಕೆ ಎಸ್‌. ಮಹೇಶ್‌ ಕುಮಾರ್ ಆಯಕ್ಷನ್ ಕಟ್ ಹೇಳುತ್ತಿದ್ದು, ಸದ್ಯ ಬೆಂಗಳೂರಿನ ಕಂಠೀರವ ಸ್ಟುಡಿಯೋದಲ್ಲಿ ಚಿತ್ರದ ನಾಲ್ಕನೇ ಹಂತದ ಚಿತ್ರೀಕರಣ ನಡೆಯುತ್ತಿದೆ. ನಿರ್ಮಾಪಕ ಉಮಾಪತಿ ಶ್ರೀನಿವಾಸ್ ಅದ್ಧೂರಿ ವೆಚ್ಚದಲ್ಲಿ ಚಿತ್ರವನ್ನು ನಿರ್ಮಿಸುತ್ತಿದ್ದಾರೆ. (ಎಂ.ಎನ್)

Leave a Reply

comments

Related Articles

error: