ಸುದ್ದಿ ಸಂಕ್ಷಿಪ್ತ

ಏಪ್ರಿಲ್ 22 ರಂದು ಚಿಂತನಾ ಸಮಾವೇಶ

ಮೈಸೂರು ವಿಶ್ವವಿದ್ಯಾನಿಲಯ, ರಾಷ್ಟ್ರೀಯ ಸೇವಾ ಯೋಜನೆ ಹಾಗೂ ಯುವಜನ ಸೇವೆ, ಯುವಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಂಯುಕ್ತಾಶ್ರಯದಲ್ಲಿ ಭಾರತ ರತ್ನ ಡಾ. ಬಿ.ಆರ್. ಅಂಬೇಡ್ಕರ್ ರವರ 126ನೇ ಜನ್ಮ ದಿನಾಚರಣೆಯ ಪ್ರಯುಕ್ತ ಚಿಂತನಾ ಸಮಾವೇಶವನ್ನು ಏಪ್ರಿಲ್ 22 ರಂದು ಮಧ್ಯಾಹ್ನ 3 ಗಂಟೆಗೆ ಮಾನಸ ಗಂಗೋತ್ರಿಯ ಮಾನವಿಕ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ.

ಮಾಜಿ ಅಡ್ವೋಕೇಟ್ ಜನರಲ್ ಹಾಗೂ ಖ್ಯಾತ ನ್ಯಾಯವಾದಿ ಪ್ರೊ. ರವಿವರ್ಮ ಕುಮಾರ್ ಅವರು ಪ್ರಧಾನ ಭಾಷಣಕಾರರಾಗಿ ಭಾಗವಹಿಸಲಿದ್ದಾರೆ. ಮೈಸೂರು ವಿಶ್ವವಿದ್ಯಾನಿಲಯ ಕುಲಪತಿ ಪ್ರೊ. ದಯಾನಂದ ಮಾನೆ ಅವರು ಅಧ್ಯಕ್ಷತೆ ವಹಿಸಲಿದ್ದಾರೆ.

ಬೆಂಗಳೂರಿನ ಯುವಸಬಲೀಕರಣ ಮತ್ತು ಕ್ರೀಡಾ ಇಲಾಖೆ ರಾಜ್ಯ ರಾ.ಸೇ.ಯೋ ಅಧಿಕಾರಿಗಳು ಹಾಗೂ ಪದನಿಮಿತ್ತ ಕಾರ್ಯದರ್ಶಿ ಡಾ. ಗಣನಾಥಶೆಟ್ಟಿ ಎಕ್ಕಾರ್, ಮೈಸೂರು ವಿಶ್ವವಿದ್ಯಾನಿಲಯ ಕುಲಸಚಿವ ಪ್ರೊ.ಜೆ. ಸೋಮಶೇಖರ್ ಅವರುಗಳು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.

Leave a Reply

comments

Related Articles

error: