
ದೇಶಪ್ರಮುಖ ಸುದ್ದಿ
ದೆಹಲಿಯಲ್ಲಿ 5506 ಹೊಸ ಕೊರೋನಾ ಪ್ರಕರಣ ಪತ್ತೆ
ದೇಶ(ನವದೆಹಲಿ)ಏ.8:- ಕೊರೋನದ ಹೊಸ ಪ್ರಕರಣಗಳ ಹೆಚ್ಚಳ ಮುಂದುವರಿದಿದೆ. ಇಂದು ರಾಷ್ಟ್ರ ರಾಜಧಾನಿಯಲ್ಲಿ 5500 ಕ್ಕೂ ಹೆಚ್ಚು ಹೊಸ ಕೊರೋನಾ ಪ್ರಕರಣ ವರದಿಯಾಗಿದೆ. ದೆಹಲಿ ಆರೋಗ್ಯ ಇಲಾಖೆ ಸಂಜೆ 7 ಗಂಟೆ ಸುಮಾರಿಗೆ ಬಿಡುಗಡೆ ಮಾಡಿದ ಮಾಹಿತಿಯ ಪ್ರಕಾರ ಕಳೆದ 24 ಗಂಟೆಗಳಲ್ಲಿ 5506 ಮಂದಿ ಕೊರೋನಾ ಸೋಂಕಿಗೆ ಒಳಗಾಗಿದ್ದಾರೆ. 20 ಮಂದಿ ಸಾವನ್ನಪ್ಪಿದ್ದಾರೆ.
ದೆಹಲಿಯಲ್ಲಿ ಮಂಗಳವಾರ 5100, ಸೋಮವಾರ 3548, ಭಾನುವಾರ 4033, ಶನಿವಾರ 3,567 ಮತ್ತು ಶುಕ್ರವಾರ 3594 ಪ್ರಕರಣಗಳು ದಾಖಲಾಗಿವೆ. ದೆಹಲಿಯಲ್ಲಿ ಈವರೆಗೆ 6,90,568 ಮಂದಿ ಕೊರೋನಾ ಸೋಂಕಿಗೆ ಒಳಗಾಗಿದ್ದು, 11,133 ಜನರು ಸಾವನ್ನಪ್ಪಿದ್ದಾರೆ. (ಏಜೆನ್ಸೀಸ್,ಎಸ್.ಎಚ್)