ಕರ್ನಾಟಕಪ್ರಮುಖ ಸುದ್ದಿ

ರಾಜ್ಯದಲ್ಲಿ ಹೆಚ್ಚುತ್ತಿರುವ ಕೊರೋನಾ ಸೋಂಕು : 6,976 ಕೊರೋನಾ ಸೋಂಕು ಪ್ರಕರಣ ಪತ್ತೆ

ರಾಜ್ಯ( ಬೆಂಗಳೂರು)ಏ.8:- ರಾಜ್ಯದಲ್ಲಿ ಕರೊನಾ ಸೋಂಕು ಪ್ರಕರಣಗಳ ಸಂಖ್ಯೆ ದಿನೇ ದಿನೇ ಏರುತ್ತಿದ್ದು, ಕಳೆದ 24 ಗಂಟೆಯಲ್ಲಿ 6,976 ಹೊಸ ಪ್ರಕರಣಗಳು ವರದಿಯಾಗಿದೆ. ಬೆಂಗಳೂರಿನಲ್ಲಿ 25 ಮಂದಿ ಸೇರಿದಂತೆ 35 ಮಂದಿ ಸಾವನ್ನಪ್ಪಿದ್ದಾರೆ.

ಇದರೊಂದಿಗೆ ದಿನದ ಸೋಂಕು ಪ್ರಮಾಣ ಶೇ. 5.56ಕ್ಕೆ ಹಾಗೂ ಮರಣ ಪ್ರಮಾಣದ ದರ ಶೇ. 0.50ಗೆ ಏರಿಕೆಯಾಗಿದೆ. ಇದರೊಂದಿಗೆ ಈವರೆಗಿನ ಸೋಂಕಿತರ ಸಂಖ್ಯೆ 10.33 ಲಕ್ಷ ದಾಟಿದ್ದು, ಮೃತರ ಸಂಖ್ಯೆ 12,731 ತಲುಪಿದೆ. ಬುಧವಾರ 2,794 ಮಂದಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದು, ಗುಣಮುಖರ ಸಂಖ್ಯೆ 9.71 ಮೀರಿದೆ.
ರಾಜ್ಯದಲ್ಲಿ ಸೋಂಕು ಹೆಚ್ಚಳದಿಂದಾಗಿ ಸಕ್ರಿಯ ಪ್ರಕರಣಗಳ ಸಂಖ್ಯೆ 49,254ಕ್ಕೆ ಹೆಚ್ಚಿದ್ದು, ಈ ಪೈಕಿ 353 ಮಂದಿ ಗಂಭೀರ ಸಮಸ್ಯೆಯಿಂದಾಗಿ ತುರ್ತು ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಉಳಿದವರು ಆಸ್ಪತ್ರೆಗಳು, ಕೋವಿಡ್ ಆರೈಕೆ ಕೇಂದ್ರ ಹಾಗೂ ಲಕ್ಷಣ ರಹಿತ ಸೋಂಕಿತರ ಮನೆಯಲ್ಲಿಯೇ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ.

ಹೆಚ್ಚು ಸೋಂಕು ವರದಿಯಾದ ಜಿಲ್ಲೆಗಳು ಬೆಂಗಳೂರು ನಗರ 4,991, ಮೈಸೂರು 243, ಬೀದರ 214, ಕಲಬುರಗಿ 205, ತುಮಕೂರು 204, ದಕ್ಷಿಣ ಕನ್ನಡ 112, ಬೆಳಗಾವಿ 101 ಹೊಸ ಸೋಂಕು ಪ್ರಕರಣಗಳು ವರದಿಯಾಗಿವೆ. 1.25 ಲಕ್ಷ ಪರೀಕ್ಷೆ ರಾಜ್ಯದಲ್ಲಿ ಬುಧವಾರ ಒಂದೇ ದಿನ 8,433ರ್ಯಾಪಿಡ್ ಅಂಟಿಜೆನ್ ಪರೀಕ್ಷೆ ಹಾಗೂ 1,16,57 ಆರ್‌ಟಿಪಿಸಿಆರ್ ಪರೀಕ್ಷೆ ಸೇರಿದಂತೆ 1.25 ಲಕ್ಷ ಮಾದರಿಗಳ ಪರೀಕ್ಷೆ ನಡೆಸಲಾಗಿದೆ. ಈವರೆಗೂ 2.22 ಕೋಟಿ ಮಾದರಿಗಳ ಕೋವಿಡ್ ಪರೀಕ್ಷೆ ನಡೆಸಲಾಗಿದೆ.

Leave a Reply

comments

Related Articles

error: