ಮೈಸೂರು

ಮೈಸೂರು ಮನಪಾ 9ಮಂದಿ ಸಿಬ್ಬಂದಿಗಳಲ್ಲಿ ಕೊರೊನಾ ಸೋಂಕು ದೃಢ

ಮೈಸೂರು, ಏ.8:-  ದೇಶ ಹಾಗೂ ರಾಜ್ಯದಲ್ಲಿ ಕೊರೊನಾ ಎರಡನೇ ಅಲೆ ಅಬ್ಬರ ಜೋರಾಗಿದ್ದು ಈ ಮಧ್ಯೆ ಮೈಸೂರು ಮಹಾನಗರ ಪಾಲಿಕೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗಿದೆ.

ನಿನ್ನೆ ನಡೆದ ಪರೀಕ್ಷೆಯಲ್ಲಿ ಮೈಸೂರು ಮಹಾನಗರ ಪಾಲಿಕೆಯ 9 ಮಂದಿಗೆ ಕೊರೋನಾ ಸೋಂಕು ದೃಢವಾಗಿದೆ. ಒಟ್ಟು 196 ಜನರಿಗೆ ಕೊರೋನಾ ಟೆಸ್ಟ್ ಮಾಡಲಾಗಿತ್ತು. ಈ ಪೈಕಿ 9 ಜನರಿಗೆ ಕೋರೊನಾ ಪಾಸಿಟಿವ್ ಕಂಡು ಬಂದಿದೆ.

ಈ ಕುರಿತು ಮಾತನಾಡಿರುವ ಪಾಲಿಕೆ ಆರೋಗ್ಯಾಧಿಕಾರಿ ಡಾ ನಾಗರಾಜ್, ಪಾಲಿಕೆಯ 9 ಸಿಬ್ಬಂದಿಗೆ ಕೊರೋನಾ ಪಾಸಿಟಿವ್ ಬಂದಿದೆ. 9 ಜನರಲ್ಲಿ ಮೂವರಿಗೆ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಉಳಿದವರು ಹೋಮ್ ಐಸೋಲೇಷನ್ ಆಗಿದ್ದಾರೆ. ಪಾಲಿಕೆ ಕಚೇರಿಗಳಲ್ಲಿ ಸ್ಯಾನಿಟೈಸ್ ಸಿಂಪಡಣೆ ಮಾಡಲಾಗುತ್ತಿದೆ. ಸಾರ್ವಜನಿಕರು ತೀರಾ ಅಗತ್ಯವಿದ್ದಲ್ಲಿ ಮಾತ್ರ ಪಾಲಿಕೆ ಕಚೇರಿಗೆ ಬನ್ನಿ. ಅನವಶ್ಯಕವಾಗಿ ಕಚೇರಿಗೆ ಬರುವುದನ್ನು ನಿಲ್ಲಿಸಿ ಎಂದು ತಿಳಿಸಿದ್ದಾರೆ. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: