ಪ್ರಮುಖ ಸುದ್ದಿಮೈಸೂರು

ರೈತರನ್ನು ದಾರಿ ತಪ್ಪಿಸಿದ ರೈತ ಮುಖಂಡರೊಬ್ಬರು ಈಗ ಕೆ ಎಸ್ ಆರ್ ಟಿ ಸಿ ನೌಕರರ ದಾರಿ ತಪ್ಪಿಸುತ್ತಿದ್ದಾರೆ : ಪ್ರತಾಪ್ ಸಿಂಹ ಆರೋಪ

ಮೈಸೂರು ಕೇಂದ್ರಿಯ ಬಸ್ ನಿಲ್ದಾಣಕ್ಕೆ ಸಂಸದ ಪ್ರತಾಪ್‌ಸಿಂಹ ಭೇಟಿ

ಮೈಸೂರು,ಏ.8:-  ಸಾರಿಗೆ ನೌಕರರ ಮುಷ್ಕರ ಹಿನ್ನೆಲೆಯಲ್ಲಿ  ಮೈಸೂರು ಕೇಂದ್ರಿಯ ಬಸ್ ನಿಲ್ದಾಣಕ್ಕೆ ಸಂಸದ ಪ್ರತಾಪ್‌ಸಿಂಹ ಭೇಟಿ ನೀಡಿದರು.
ಬಸ್ ಸೇವೆಯ ಪರ್ಯಾಯ ವ್ಯವಸ್ಥೆ ಹಾಗೂ ಮುಷ್ಕರದ ಕುರಿತು ಮಾಹಿತಿ ಸಂಗ್ರಹಿಸಿದರು. ಖಾಸಗಿ ಬಸ್ ಮಾಲೀಕ ಹಾಗೂ ಚಾಲಕರನ್ನು ಮಾತನಾಡಿಸಿದರು.
ನೀವು ಎಷ್ಟು ಜನ ಇದ್ದೀರಾ? ಎಲ್ಲಿಗೆ ಬಸ್ ಓಡಿಸುತ್ತೀರಾ? ನಿಮ್ ಬಸ್ ದರ ಎಷ್ಟು?
ರ‌್ಯಾಶ್ ಡ್ರೈವಿಂಗ್ ಮಾಡಬೇಡಿ. ಹೆಚ್ಚಿನ ಹಣ ವಸೂಲಿ ಮಾಡಬೇಡಿ. ನಿಮಗೆ ಬೇಕಾದ ವ್ಯವಸ್ಥೆಯನ್ನು ಅಧಿಕಾರಿಗಳೇ ಮಾಡಿಕೊಡುತ್ತಾರೆ ಎಂದರಲ್ಲದೆ ಇಡೀ ಬಸ್ ನಿಲ್ದಾಣ ರೌಂಡ್ ಹಾಕಿ ಪರಿಶೀಲನೆ ನಡೆಸಿದರು.  ಮೈಸೂರಿನ ಕೇಂದ್ರೀಯ ಬಸ್ ನಿಲ್ದಾಣದಲ್ಲಿ ಒಂದು ಸುತ್ತು ಪ್ರದಕ್ಷಿಣೆ ಹಾಕಿದರು.

ರೈತರನ್ನೇ ದಾರಿ ತಪ್ಪಿಸಿದವರನ್ನು ಕೆಎಸ್ ಆರ್ ಟಿಸಿ ನೌಕರರು ತಮ್ಮ ನಾಯಕನಾಗಿ ಮಾಡಿಕೊಂಡಾಗ ಇವರು ದಾರಿ ತಪ್ಪದೆ ಇರುತ್ತಾರಾ ಎಂದು ಪ್ರಶ್ನಿಸಿದರು. ಸಾರಿಗೆ ನೌಕರರ ಮುಷ್ಕರಕ್ಕೆ ಸಿಡಿಮಿಡಿಗೊಂಡ ಅವರು ರೈತರನ್ನು ದಾರಿ ತಪ್ಪಿಸಿದ ರೈತ ಮುಖಂಡರೊಬ್ಬರು ಈಗ ಕೆ ಎಸ್ ಆರ್ ಟಿ ಸಿ ನೌಕರರ ದಾರಿ ತಪ್ಪಿಸುತ್ತಿದ್ದಾರೆ.
ಆ ಮುಖಂಡನನ್ನು ಕೆ ಎಸ್ ಆರ್ ಟಿ ಸಿ ನೌಕರರು ತಮ್ಮ ನಾಯಕ ಎಂದು ಮಾಡಿಕೊಂಡಿದ್ದು ತಪ್ಪು. ಪ್ರೊ.‌ನಂಜುಂಡಸ್ವಾಮಿ, ಕೆ.ಎಸ್. ಪುಟ್ಟಣ್ಣಯ್ಯ ಅವರು ಇದ್ದಾಗ ರೈತಮುಂಡರು, ಹೋರಾಟದ ಬಗ್ಗೆ ಗೌರವವಿತ್ತು. ಅವರಿಬ್ಬರು ಅಸ್ತಂಗತ ಆದ ನಂತರ ಈಗ ಅಂತಹ ಮುಖ ಆ ಹೋರಾಟದಲ್ಲಿ ಇಲ್ಲ. ಈಗ ಇರುವವರು ಖಾಲಿ ಹೋರಾಟಗಾರರು. ಹಾಗಾಗಿ ಇಂತಹ ಹೋರಾಟಗಾರರನ್ನು ನಂಬಿದರೆ ನೌಕರರು ಸಹ ದಾರಿತಪ್ಪುತ್ತಾರೆ. ನಾವು ಎಲ್ಲಾ ವಿಭಾಗಗಳಲ್ಲಿ ಖಾಸಗೀಕರಣದ ಬಗ್ಗೆ ಚರ್ಚೆ ಮಾಡುತ್ತಿದ್ದೇವೆ. ಕೆ ಎಸ್ ಆರ್ ಟಿ ಸಿ ನೌಕರರು ರಾಜ್ಯ ಸರಕಾರ ಸಂಕಷ್ಟದಲ್ಲಿ ಇರುವಾಗ ಈ ರೀತಿ ಹೋರಾಟಕ್ಕೆ ಇಳಿಯುವುದು ತಪ್ಪು. ಇದು ಮುಂದುವರಿದರೆ ಜನರೇ ಈ ವಿಭಾಗದಲ್ಲೂ ಖಾಸಗೀಕರಣದ ಬಗ್ಗೆ ಧ್ವನಿ ಎತ್ತುತ್ತಾರೆ. ಜನ ಈ ಬಗ್ಗೆ ಧ್ವನಿ ಎತ್ತುವಂತೆ ಮಾಡಬೇಡಿ. ಜಾಸ್ತಿ ಕೆಲಸ ಮಾಡುವ ನಿಮ್ಮ ಮೇಲೆ ಜನ ಪ್ರೀತಿ ಇಟ್ಟಿದ್ದಾರೆ.
ಆ ಪ್ರೀತಿ ಕಳೆದು ಕೊಳ್ಳಬೇಡಿ. ಎಸ್ಮಾ ಜಾರಿ ಮಾಡಿ ಬಲವಂತವಾಗಿ ಕೆಲಸಕ್ಕೆ ಹಾಜರಾಗುವಂತಹ ಪರಿಸ್ಥಿತಿ ತಂದು ಕೊಳ್ಳಬೇಡಿ. ಎಸ್ಮಾ ಜಾರಿಯ ಅನಿರ್ವಾಯತೆಯನ್ನು ಸರಕಾರಕ್ಕೆ ತಂದಿಡಬೇಡಿ ಎಂದು ಎಚ್ಚರಿಸಿದರು.

ಸಿದ್ದರಾಮಯ್ಯ ಅವರು ಈಗ ಬೇಡಿಕೆ ಈಡೇರಿಸಿ ಎನ್ನುತ್ತಿದ್ದಾರೆ. ಅವರ ಅಧಿಕಾರವಧಿಯಲ್ಲೇ ಅವರು ಈ ಕೆಲಸ ಮಾಡಬಹುದಿತ್ತಲ್ವಾ?. ಸಿದ್ದರಾಮಯ್ಯ ಅವರ ಇವತ್ತಿನ ಮಾತನ್ನು ಜನರು ಮೆಚ್ಚಲ್ಲ ಅವರ ಆತ್ಮಸಾಕ್ಷಿಯೂ ಮೆಚ್ಚಲ್ಲ ಎಂದರು. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: